ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 5 ಜುಲೈ 2019 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹೊಸ ವ್ಯವಹಾರಗಳಲ್ಲಿ ವಂಚನೆಗೊಳಗಾಗುವ ಭೀತಿಯಿದೆ, ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಆರೋಗ್ಯದಲ್ಲಿ ಸುಧಾರಣೆ.

ವೃಷಭ: ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಬೇಕಾದರೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಕೃಷಿಕರ ಬವಣೆಗೆ ಕೊನೆಯಿರಲ್ಲ. ಆರ್ಥಿಕವಾಗಿ ಧನಾಗಮನಕ್ಕೆ ಇತರೆ ಮಾರ್ಗಗಳ ಬಗ್ಗೆ ಯೋಚನೆ ಮಾಡುವಿರಿ.

ಮಿಥುನ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗುತ್ತವೆ. ಇದರಿಂದ ಕೆಲಸ ಕಾರ್ಯಗಳು ಅಂದುಕೊಂಡ ರೀತಿಯಲ್ಲಿ ಸಾಗದು. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಕೊಡಬೇಕಾಗುತ್ತದೆ.

ಕರ್ಕಟಕ: ಮನೆಯಲ್ಲಿ ಸಂಗಾತಿ ಜತೆಗೆ ಕೌಟುಂಬಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಚಾರದಲ್ಲಿ ಮನಸ್ತಾಪವಾಗಬಹುದು. ಬಂಧು ಮಿತ್ರರಿಂದ ಚಾಡಿ ಮಾತು ಕೇಳಬೇಕಾಗಬಹುದು. ನೂತನ ದಂಪತಿಗಳಿಗೆ ಶುಭ ದಿನ.

ಸಿಂಹ: ಹಣಕಾಸಿನ ತೊಂದರೆಯಿದ್ದರೂ ಅಂದುಕೊಂಡ ಕಾರ್ಯಗಳನ್ನು ಸುಲಲಿತವಾಗಿ ನೆರವೇರಿಸುವಿರಿ. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಉದ್ಯೋಗದಲ್ಲಿ ಮುನ್ನಡೆ.

 
ಕನ್ಯಾ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ. ಸಾಲ ಮರುಪಾವತಿ ಚಿಂತೆ ಕಾಡುವುದು. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಾಗುವಿರಿ.

ತುಲಾ: ಆಲಸ್ಯತನ ಎನ್ನುವುದು ಕೆಲಸ ಹಾಳು ಮಾಡುತ್ತದೆ ಎಂದು ನೆನಪಿರಲಿ. ಉದಾಸೀನ ಪ್ರವೃತ್ತಿಯಿಂದ ಸದವಕಾಶಗಳನ್ನು ಕಳೆದುಕೊಳ್ಳಬೇಡಿ. ಶೀತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಬಹುದು.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಮಾಧಾನಕ್ಕೆ ಕಾರಣರಾಗುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿನ್ನಡೆಯಾಗಲಿದೆ. ಮನೆಗೆ ಬೇಕಾದ ವಸ್ತುಗಳಿಗೆ ಖರ್ಚುವೆಚ್ಚ ಮಾಡುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸುವ ಬಗ್ಗೆ ಚಿಂತನೆ ನಡೆಸುವಿರಿ. ಯಾರದೋ ಮಾತಿಗೆ ನಿಮ್ಮ ಬಗ್ಗೆ ಕೀಳರಿಮೆ ಬೆಳೆಸಿಕೊಳ್ಳಬೇಡಿ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮಕರ: ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ವೃತ್ತಿ ರಂಗದಲ್ಲಿ ಅಧಿಕ ಕಾರ್ಯದೊತ್ತಡವಿರುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರ ಯೋಗವಿದೆ.

ಕುಂಭ: ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಆಸ್ತಿ ವಿವಾದದಲ್ಲಿ ನಿಮಗೆ ಅನುಕೂಲಕರವಾದ ತೀರ್ಪು ಬರಲಿದೆ. ಸಂಗಾತಿಯ ಆರೋಗ್ಯದ ಬಗ್ಗೆ ನಿಗಾವಹಿಸಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುತ್ತದೆ.

ಮೀನ: ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಆದರೆ ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವ್ಯಾಪಾರ, ವಹಿವಾಟು ನಡೆುಸವವರಿಗೆ ಲಾಭವಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments