ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 11 ಡಿಸೆಂಬರ್ 2019 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಸಂಗಾತಿಯ ನಿರ್ಧಾರಗಳು ಮನಸ್ಸಿಗೆ ಅಸಮಾಧಾನ ತರಿಸೀತು. ಹಾಗಿದ್ದರೂ ಕೌಟುಂಬಿಕ ನೆಮ್ಮದಿಗಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ನಿಮ್ಮ ಕ್ರಿಯಾಶೀಲತೆಗೆ ಫಲ ಸಿಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸಂಯಮ ಕಳೆದುಕೊಳ್ಳದಿರುವುದು ಮುಖ್ಯ. ಹಿರಿಯರ ದೇಹಾರೋಗ್ಯದ ಬಗ್ಗೆ ಎಚ್ಚರವಿರಲಿ.

ಮಿಥುನ: ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಮಿತ್ರರಿಂದ ಪರಿಹಾರ ಸಿಗುವುದು. ಸಾಲಗಾರರಿಂದ ಮುಕ್ತಿ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ. ಉದರ ಸಂಬಂಧೀ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಮಿತ್ರರ ಕಷ್ಟ ಪರಿಹಾರ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವಿರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಪಾಲು ಬಂಡವಾಳ ಹೂಡಿಕೆಯಲ್ಲಿ ಕೊಂಚ ಮಟ್ಟಿಗೆ ಲಾಭ ಕಂಡುಬಂದೀತು. ಕಾರ್ಯನಿಮಿತ್ತ ಕಿರುಸಂಚಾರ ಮಾಡಬೇಕಾಗುತ್ತದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನ ಯೋಗವಿದೆ. ವೈದ್ಯಕೀಯ ವೃತ್ತಿಯವರಿಗೆ ಕೀರ್ತಿ ಸಂಪಾದನೆ ಮಾಡುವ ಯೋಗವಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ.

 
ಕನ್ಯಾ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಸಂಗಾತಿಯ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರಿಂದ ಉಡುಗೊರೆ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಲಾಭವಿದೆ. ಸಾಧು ಸಂತರ ಭೇಟಿಯಾಗಲಿದ್ದೀರಿ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚುವುದು. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು.

ವೃಶ್ಚಿಕ: ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಪ್ರೀತಿ ಪಾತ್ರರ ಮನಸ್ಸು ನೋಯಿಸುವಂತಹ ಮಾತನಾಡಬೇಡಿ. ನಾಲಿಗೆಗೆ ಕಡಿವಾಣವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು.

ಧನು: ಸಂಗಾತಿಯ ಮನದಾಸೆ ಪೂರೈಸಲು ಓಡಾಟ ನಡೆಸಬೇಕಾಗುತ್ತದೆ. ಕಿರಿಯರಿಗೆ ಉಡುಗೊರೆ ನೀಡುವಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮೇಲುಗೈ ಸಾಧಿಸುವಿರಿ. ದಾಯಾದಿ ಕಲಹಗಳು ಅಂತ್ಯವಾಗಲಿದೆ. ಋಣಾತ್ಮಕ ಚಿಂತೆಗಳಿಗೆ ಕಡಿವಾಣಹಾಕಿ.

ಮಕರ: ದೈವಾನುಗ್ರಹದಿಂದ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು. ಆದರೆ ಲೆಕ್ಕಪತ್ರದ ವಿಚಾರದಲ್ಲಿ ನಿಗಾ ಇರಲಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ.

ಕುಂಭ: ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲು ಓಡಾಟ ನಡೆಸಬೇಕಾಗುತ್ತದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಸಾಂಸಾರಿಕವಾಗಿ ಸಮಸ್ಯೆಗಳು ದೂರವಾಗಲಿದೆ. ಕಿರು ಸಂಚಾರ ಮಾಡಬೇಕಾಗಬಹುದು.

ಮೀನ: ಹೊಸ ಜನರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವಾಹನ, ಭೂಮಿ ಖರೀದಿ ಯೋಗವಿದೆ. ಗೃಹ ನಿರ್ಮಾಣ ಕಾರ್ಯ ಆರಂಭಿಸಲು ಉತ್ತಮ ಸಮಯ. ಕೆಳಹಂತದ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಶಿವ ಷಡಕ್ಷರೀ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಜ್ಯೋತಿಷ್ಯ ಪ್ರಕಾರ ಮಕರ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments