ಮೇಷ: ದೇಹಾರೋಗ್ಯದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆ ಕಂಡುಬಂದರೂ ಮಾನಸಿಕವಾಗಿ ಚಿಂತೆ ತಪ್ಪದು. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ತಲೆದೋರಬಹುದು. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ. ದೇವತಾ ಪ್ರಾರ್ಥನೆ ಮಾಡಿ.
ವೃಷಭ: ವ್ಯವಹಾರದಲ್ಲಿ ಮುನ್ನಡೆ ಗಳಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚದ ಬಗ್ಗೆ ನಿಗಾ ಅಗತ್ಯ. ಇಷ್ಟ ಮಿತ್ರರ ಭೇಟಿ ಸಾಧ್ಯತೆಯಿದೆ. ಗೃಹ ಸಂಬಂಧೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತ ಕೊರತೆ ಉಂಟಾಗಬಹುದು.
ಮಿಥುನ: ದುಡುಕು ಮಾತು, ವರ್ತನೆಯಿಂದ ಪ್ರೀತಿ ಪಾತ್ರರ ಮನಸ್ಸು ನೋಯಿಸುವ ಕೆಲಸ ಮಾಡಬೇಡಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಅಭಿಪ್ರಾಯ ಪಡೆಯುವುದು ಉತ್ತಮ. ದಾಯಾದಿ ಕಲಹಗಳು ನಿವಾರಣೆಯಾಗಲಿವೆ.
ಕರ್ಕಟಕ: ಹೊಸ ವ್ಯವಹಾರಗಳಿಗೆ ಕೈ ಹಾಕಲು ಸಕಾಲ. ಆದರೆ ಯಾವುದೇ ವ್ಯವಹಾರದಲ್ಲಿ ಬಂಡವಾಳ ಹೂಡುವ ಮೊದಲು ಎಚ್ಚರಿಕೆಯಿಂದಿರುವುದು ಮುಖ್ಯ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಸಂಗಾತಿಯ ಮನದಾಸೆ ಪೂರೈಸುವಿರಿ.
ಸಿಂಹ: ಯೋಜಿತ ಕೆಲಸಗಳಿಗೆ ಚಾಲನೆ ನೀಡುವಿರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ರಾಜಕೀಯ ರಂಗದಲ್ಲಿರುವವರಿಗೆ ಉತ್ತಮ ಸ್ಥಾನ ಮಾನದ ಯೋಗವಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.
ಕನ್ಯಾ: ಕೌಟುಂಬಿಕ ಸಮಸ್ಯೆಗಳ ನಿವಾರಣೆಗೆ ದೇವರ ಮೊರೆ ಹೋಗುವಿರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಮಾಡುವಿರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು.
ತುಲಾ: ವ್ಯವಹಾರ ಕ್ಷೇತ್ರದಲ್ಲಿ ನೀವು ಬಯಸಿದ್ದೇ ಆಗುವುದು. ಭೂಮಿ, ಮನೆ ಖರೀದಿಗೆ ಧನ ವ್ಯಯವಾಗಲಿದೆ. ಹಿರಿಯರ ದೇಹಾರೋಗ್ಯ ಹದಗೆಟ್ಟು ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಕಿರು ಸಂಚಾರ ಮಾಡುವಿರಿ.
ವೃಶ್ಚಿಕ: ವ್ಯವಹಾರದಲ್ಲಿ ಮಿತ್ರರನ್ನೂ ನಂಬಲು ಆಗದಂತಹ ಪರಿಸ್ಥಿತಿ ನಿಮ್ಮದಾಗಲಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಸಾಧು ಸಂತರ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.
ಧನು: ಅನಗತ್ಯ ವಿಚಾರಗಳ ಬಗ್ಗೆ ಚಿಂತೆ ಮಾಡುತ್ತಾ ಮಾನಸಿಕ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಶುಭ ಮಂಗಲ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ವಿದ್ಯಾರ್ಥಿಗಳು ಕಠಿಣ ಪ್ರಯತ್ನ ನಡೆಸಿದರಷ್ಟೇ ಫಲ ಸಿಗಬಹುದು.
ಮಕರ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿವೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಅನಿರೀಕ್ಷಿತ ವೆಚ್ಚಗಳೂ ತಲೆದೋರಲಿವೆ. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ದೊರೆಯಲಿದೆ.
ಕುಂಭ: ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸಬೇಕಾಗುತ್ತದೆ. ಮಕ್ಕಳ ವಿಚಾರದಲ್ಲಿ ಆತಂಕವಾಗಬಹುದು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಬಂಧು ಮಿತ್ರರ ಭೇಟಿಯಿಂದ ಸಂತಸವಾಗಲಿದೆ.
ಮೀನ: ಮಹಿಳೆಯರಿಗೆ ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಸಿಗಲಿದೆ. ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ವಾಹನ ಖರೀದಿ ಯೋಗವಿದೆ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕಾಡುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.