ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಮಾನಸಿಕವಾಗಿ ಒಂದು ರೀತಿಯ ಗೊಂದಲ ಕಾಡಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ಹಾಗಿದ್ದರೂ ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ದೂರ ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಇಷ್ಟ ದೇವರ ಪ್ರಾರ್ಥನೆಯಿಂದ ಮನಸ್ಸಲ್ಲಿ ಅಂದುಕೊಂಡ ಕೆಲಸ ನೆರವೇರುವುದು.
ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶಯಾನ ಮಾಡುವ ಯೋಗವಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ದಿನದಂತ್ಯಕ್ಕೆ ಅಚ್ಚರಿ.
ಕರ್ಕಟಕ: ಹಿರಿಯರ ತೀರ್ಥ ಯಾತ್ರೆಗಳಿಗೆ ಏರ್ಪಾಟು ಮಾಡುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಕಂಡುಬರಲಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ಕೊರತೆಯುಂಟಾಗಬಹುದು.
ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನೀವು ಅಂದುಕೊಂಡಂತೇ ಕೆಲಸಗಳು ನೆರವೇರಿ ಮನಸ್ಸಿಗೆ ನೆಮ್ಮದಿಯಾಗುವುದು. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದರೂ ನಷ್ಟವಾಗದು. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.
ತುಲಾ: ಮಿತ್ರರಿಗಾಗಿ ಕೆಲವೊಂದು ತ್ಯಾಗಕ್ಕೆ ಸಿದ್ಧರಾಗಬೇಕಾಗುತ್ತದೆ. ಸಹೋದರರೊಂದಿಗೆ ಆಸ್ತಿ ವಿವಾದ ತಲೆದೋರಬಹುದು. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ವೃಶ್ಚಿಕ: ನೀವು ಅಂದುಕೊಂಡ ಕೆಲಸ ಕಾರ್ಯಗಳು ಅರ್ಧಕ್ಕೇ ನಿಂತುಹೋದೀತು. ಆದರೂ ತಾಳ್ಮೆ ಕಳೆದುಕೊಳ್ಳಬೇಡಿ. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು.
ಧನು: ಸಕಾರಾತ್ಮಕವಾಗಿ ಯೋಚನೆ ಮಾಡಬೇಕಾದ ಅಗತ್ಯವಿದೆ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದಲೇ ಬರುವಂತಹ ಸಮಸ್ಯೆಗಳನ್ನು ನಿವಾರಿಸುವಿರಿ. ಮಕ್ಕಳಿಂದ ಸಂತಸ ನಿರೀಕ್ಷಿಸಬಹುದು. ಆದರೆ ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ.
ಮಕರ: ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಹಿತಶತ್ರುಗಳೊಂದಿಗೆ ವ್ಯವಹರಿಸುವಾಗ ಎಚ್ಚರವಾಗಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
ಕುಂಭ: ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಆದರೆ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆ ವಹಿಸಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಋಣಾತ್ಮಕ ಚಿಂತನೆಗೆ ಅವಕಾಶ ಕೊಡದಿರಿ.
ಮೀನ: ವೃತ್ತಿರಂಗದಲ್ಲಿ ಮಹಿಳೆಯರಿಂದ ಅಪವಾದದ ಭೀತಿಯಿದೆ. ನೆರೆಹೊರೆಯವರೊಂದಿಗೆ ದುಡುಕಿನ ವರ್ತನೆ ತೋರದಿರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಲ ಬಾಧೆಯಿಂದ ಮುಕ್ತರಾಗುವಿರಿ. ಸಾಧು ಸಂತರ ಭೇಟಿ ಸಾಧ‍್ಯತೆ.