ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 3 ಮಾರ್ಚ್ 2020 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನಿರೀಕ್ಷೆಯಂತೇ ನಡೆಯದೇ ಮನಸ್ಸಿಗೆ ಗೊಂದಲವಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಕೊಂಚ ಏರುಪೇರಾದೀತು. ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಸಾಂಸಾರಿಕವಾಗಿ ಸಮಸ್ಯೆಗಳು ನಿಧಾನವಾಗಿ ಪರಿಹಾರವಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗುವುದು. ನೂತನ ದಂಪತಿಗಳು ಸಂತಸದ ಕ್ಷಣ ಕಳೆಯಲಿದ್ದಾರೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಅಧಿಕ ಓಡಾಟ ನಡೆಸಬೇಕಾದೀತಾದರೂ, ಅಂತಿಮವಾಗಿ ಜಯ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಅಸಾಧ‍್ಯವಾಗಿದ್ದನ್ನು ಸಾಧಿಸಿದ ಸಂತೋಷ ಸಿಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಸಾಂಸಾರಿಕವಾಗಿ ಸಂಗಾತಿಯ ಸಲಹೆಗಳನ್ನು ಪಾಲಿಸಿದಲ್ಲಿ ಒಳಿತು. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲಿದ್ದೀರಿ. ಮನೆ ರಿಪೇರಿಗಾಗಿ ಧನ ವ್ಯಯವಾಗಲಿದೆ. ವ್ಯವಹಾರದಲ್ಲಿ ಹಿತಶತ್ರುಗಳ ಕಾಟ ಕಡಿಮೆಯಾಗಲಿದೆ. ಅತಿಥಿಗಳ ಆಗಮನವಾಗಲಿದೆ.

ಸಿಂಹ: ವೃತ್ತಿರಂಗದಲ್ಲಿ ಅನಗತ್ಯ ವಾದ ವಿವಾದಗಳಿಗೆ ಅವಕಾಶ ಮಾಡಿಕೊಡಬೇಡಿ. ಸಂಯಮದಿಂದ ನಿಭಾಯಿಸುವೇ ಜಾಣತನ. ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ಹಿರಿಯರಿಗೆ ತೀರ್ಥ ಯಾತ್ರೆಯ ಭಾಗ್ಯವಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಕನ್ಯಾ: ಹಿತ ಶತ್ರುಗಳ ಕಾಟದಿಂದಾಗಿ ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರೈಸಲು ಹಲವು ಅಡೆತಡೆಗಳು ತೋರಿಬರಲಿವೆ. ಕಾರ್ಯಕ್ಷೇತ್ರದಲ್ಲಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ.

ತುಲಾ: ಸಾಂಸಾರಿಕವಾಗಿ ಪತ್ನಿಯ ಮಾತಿಗೆ ಮರುಳಾಗಿ ಅನಗತ್ಯ ತೊಂದರೆ ಮೈಮೇಲೆಳೆದುಕೊಳ್ಳಬೇಡಿ. ಸಾಮಾಜಿಕವಾಗಿ ನಿಮ್ಮ ಕ್ರಿಯಾಶೀಲತೆಗೆ ಜನಮನ್ನಣೆ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಅತಿ ಉತ್ಸಾಹ ತೋರಲು ಹೋದರೆ ತೊಂದರೆ ಮೈಮೇಲೆಳೆದುಕೊಳ್ಳಬೇಕಾಗುತ್ತದೆ. ಪ್ರೇಮಿಗಳಿಗೆ ಶುಭವಾಗಲಿದೆ. ವ್ಯಾಪಾರಿಗಳಿಗೆ ಹೊಸ ಬಂಡವಾಳ ಹೂಡಲು ಇದು ಸಕಾಲ. ದೂರ ಸಂಚಾರ ಮಾಡಬೇಕಾಗುತ್ತದೆ.

ಧನು: ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಕುಟುಂಬ ವರ್ಗದವರಲ್ಲಿ ನಿಮ್ಮ ಕೆಲವೊಂದು ನಿರ್ಧಾರಗಳಿಂದ ಅಸಮಾಧಾನ ಉಂಟಾಗಬಹುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಬೇಕಾಗುತ್ತದೆ.

ಮಕರ: ಸ್ವಂತ ಉದ್ಯಮ ಸ್ಥಾಪಿಸಲು ಇದು ಸಕಾಲ. ಮನೆ, ಭೂಮಿ ಖರೀದಿಗೆ ಮುಂದಾಗಲಿದ್ದೀರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಕೌಟುಂಬಿಕ ಬಿಕ್ಕಟ್ಟುಗಳ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರವಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆ ಸಿಗಲಿದೆ.

ಕುಂಭ: ಕಷ್ಟದ ಸಮಯದಲ್ಲೂ ನಿಮ್ಮ ಕ್ರಿಯಾತ್ಮಕ ಯೋಚನೆಯಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ನಿಮ್ಮ ಆಶಾವಾದವೇ ನಿಮಗೆ ಶ್ರೀರಕ್ಷೆಯಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ.

ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಸೋಲು ನಿಮ್ಮ ಸಹನೆ ಪರೀಕ್ಷೆ ನಡೆಸಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments