ಮೇಷ: ಕಾರ್ಯಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು ಎದುರಾದೀತು. ಬೇರೆಯವರ ಬಗ್ಗೆ ಚಿಂತೆ ಮಾಡದೇ ನಿಮ್ಮ ಪಾಲಿನ ಕರ್ತವ್ಯ ನಿಭಾಯಿಸಿದರೆ ತೊಂದರೆಯಾಗದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.
ವೃಷಭ: ಎಲ್ಲವನ್ನೂ ನಿಭಾಯಿಸುವ ಛಾತಿ ಬೆಳೆಸಿಕೊಳ್ಳಬೇಕು. ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಗೆ ಕ್ರಿಯಾತ್ಮಕ ಯೋಚನೆಗಳಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.
ಮಿಥುನ: ಸಾಂಸಾರಿಕ ಜೀವನದಲ್ಲಿ ಅನಿರೀಕ್ಷಿತ ತಿರುವುಗಳು ಕಾಣಲಿವೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಅಗತ್ಯ. ಮಾತಿಗಿಂತ ಕೃತಿಯ ಕಡೆಗೆ ಗಮನಕೊಡಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಕಡೆಗೆ ಚಿಂತನೆ ನಡೆಸುವುದು ಉತ್ತಮ.
ಕರ್ಕಟಕ: ಸಂಗಾತಿಯ ಸಹಕಾರದಿಂದ ಕಷ್ಟದ ಕೆಲಸಗಳನ್ನು ಸುಲಭವಾಗಿ ನಿಭಾಯಿಸುವಿರಿ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಅವಕಾಶ ಒದಗಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸುವಿರಿ.
ಸಿಂಹ: ಉದ್ಯೋಗ, ವೃತ್ತಿರಂಗದಲ್ಲಿ ಕಾರ್ಯದೊತ್ತಡವಿದ್ದರೂ ಎಲ್ಲವನ್ನೂ ನಿಭಾಯಿಸುವ ಜಾಣ್ಮೆ ಇರುವುದರಿಂದ ಚಿಂತೆ ಬೇಕಾಗಿಲ್ಲ. ರಾಜಕೀಯ ರಂಗದವರಿಗೆ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದ ನಡೆದುಕೊಳ್ಳಿ. ಬೇಡದ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ.
ಕನ್ಯಾ: ಮಿತ್ರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ನೀವೇ ತೊಂದರೆಗೆ ಸಿಲುಕಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆಯಿಂದಿರುವುದು ಮುಖ್ಯ. ಆರ್ಥಿಕ ಯೋಜನೆಗಳ ಬಗ್ಗೆ ಸರಿಯಾದ ಲೆಕ್ಕಾಚಾರವಿರಲಿ. ಕೋರ್ಟು ಕಚೇರಿ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ.
ತುಲಾ: ದೂರ ಸಂಚಾರ ಮಾಡಲಿದ್ದು, ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ವಾಹನ, ಭೂಮಿ ಖರೀದಿಗೆ ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ಮನದಾಸೆ ಪೂರೈಸಲು ಮುಂದಾಗಲಿದ್ದೀರಿ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ.
ವೃಶ್ಚಿಕ: ಎಷ್ಟೋ ದಿನದಿಂದ ಅಂದುಕೊಳ್ಳುತ್ತಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಪ್ರೇಮಿಗಳಿಗೆ ಅಗಲುವಿಕೆಯ ನೋವು ಕಾಡಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾದೀತು. ಮನೆಯಲ್ಲಿ ನಡೆಸಲುದ್ದೇಶಿಸಿದ್ದ ಶುಭ ಮಂಗಲ ಕಾರ್ಯಗಳು ಮುಂದೂಡಿಕೆಯಾಗಲಿದೆ.
ಧನು: ಆತ್ಮೀಯರಿಗೆ ಆರೋಗ್ಯ ಸಮಸ್ಯೆ ಕಂಡುಬರಲಿದ್ದು, ಆಸ್ಪತ್ರೆಗೆ ಅಲೆದಾಡಬೇಕಾದೀತು. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೊರಬೇಕಾಗುತ್ತದೆ. ಮಾತಿನ ಮೇಲೆ ನಿಗಾ ಇರಲಿ. ಕೃಷಿಕರಿಗೆ ಕೆಲಸ ಕಾರ್ಯಗಳಿಗೆ ತೊಂದರೆ ಎದುರಾದೀತು. ಎಚ್ಚರಿಕೆ.
ಮಕರ: ನೀವು ಕೈ ಹಿಡಿದ ಕೆಲಸಗಳು ಯಶಸ್ವಿಯಾಗಿ ಪೂರ್ತಿಯಾಗಲಿದ್ದು, ಫಲಪ್ರದ ದಿನ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗವಿದೆ. ಆರ್ಥಿಕವಾಗಿ ಸಾಲ ಪಾವತಿ ಚಿಂತೆ ದೂರವಾಗಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.
ಕುಂಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾಗಲಿದೆ. ವಾಹನಾದಿ ಸೌಲಭ್ಯ ಖರೀದಿಗೆ ಕೆಲವು ದಿನ ಕಾಯುವುದು ಉತ್ತಮ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಗೃಹಿಣಿಯರಿಗೆ ಕೆಲಸದೊತ್ತಡ ಕಡಿಮೆಯಾಗಲಿದೆ.
ಮೀನ: ನೀವು ಬಯಸಿದ್ದು ಒಂದು ಆಗುವುದು ಇನ್ನೊಂದು ಎಂಬ ಸ್ಥಿತಿ ನಿಮ್ಮದಾಗಲಿದೆ. ಸರಕಾರಿ ಕೆಲಸ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ಜವಾಬ್ಧಾರಿ ಹೆಚ್ಚಲಿದೆ. ನೂತನ ದಂಪತಿಗಳಿಗೆ ಸಂತೋಷದ ದಿನ.