ಮೇಷ: ನೀವು ಎಷ್ಟೇ ಉತ್ಸಾಹದಿಂದ ಕೆಲಸದಲ್ಲಿ ತೊಡಗಿಸಿಕೊಂಡರೂ ಅದಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾಗಬಹುದು. ಆರ್ಥಿಕವಾಗಿ ಭವಿಷ್ಯದ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಷಭ: ಕೆಲವೊಂದು ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಹೋದ್ಯೋಗಿಗಳ ಅಭಿಪ್ರಾಯವನ್ನೂ ಪರಿಗಣಿಸಬೇಕಾಗುತ್ತದೆ. ಕೃಷಿಕರಿಗೆ ವ್ಯವಹಾರಕ್ಕೆ ಪೂರಕವಾದ ವಾತಾವರಣ ಒದಗಿಬರಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.
ಮಿಥುನ: ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಬಯಸಿದ ಉದ್ಯೋಗಕ್ಕೆ ಕರೆಬರಲಿದೆ. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಪರಿಶ್ರಮಪಡಬೇಕಾಗುತ್ತದೆ. ಸರಕಾರಿ ಕೆಲಸಗಳಲ್ಲಿ ತೊಡಕು ಉಂಟಾಗಬಹುದು. ತಾಳ್ಮೆಯಿಂದ ಯೋಚಿಸಿದಲ್ಲಿ ಪರಿಹಾರ ಕಂಡುಕೊಳ್ಳಬಹುದು.
ಕರ್ಕಟಕ: ನಿರುದ್ಯೋಗಿಗಳು ಕೈಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ವೃತ್ತಿರಂಗದಲ್ಲಿ ಹಿತಶತ್ರುಗಳಿಂದ ದೂರವಿರುವುದೇ ಉತ್ತಮ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗಗ ಎಚ್ಚರಿಕೆಯಿಂದಿರಿ. ಕಿರು ಸಂಚಾರ ಯೋಗವಿರುತ್ತದೆ.
ಸಿಂಹ: ದೇಹಾರೋಗ್ಯದಲ್ಲಿ ಆಗುವ ಸಣ್ಣ ಪುಟ್ಟ ಬದಲಾವಣೆಯನ್ನೂ ಉಪೇಕ್ಷಿಸುವುದು ಬೇಡ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರ, ವ್ಯವಹಾರಗಳಿಗೆ ಹೊಸ ಬಗೆಯ ಪ್ರಯೋಗಗಳು ಪ್ರಯೋಜನಕ್ಕೆ ಬರಲಿವೆ. ಚಿಂತೆ ಬೇಡ.
ಕನ್ಯಾ: ಇಷ್ಟು ದಿನ ಕಾದಿದ್ದ ವ್ಯಕ್ತಿಯ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಿರದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
ತುಲಾ: ಕೈಗೊಂಡ ಕಾರ್ಯಗಳಲ್ಲಿ ಜಯ ಸಿಗಲಿದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭ. ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಪರಿಶ್ರಮ ಸಿಗಲಿದೆ. ವಾಹನ ಖರೀದಿಗೆ ಸಕಾಲ. ದೂರ ಸಂಚಾರದಿಂದ ಕಾರ್ಯ ಸಿದ್ಧಿಯಾಗಲಿದೆ.
ವೃಶ್ಚಿಕ: ಉದ್ಯೋಗ ಬದಲಾವಣೆಗೆ ಇದು ಸಕಾಲವಲ್ಲ. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆ ಸಿಗಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿದೆ. ಕ್ರಿಯಾತ್ಮಕವಾಗಿ ಯೋಚನೆ ಮಾಡಿದರೆ ಸಮಸ್ಯೆಗಳಿಗೆ ಪರಿಹಾರ ಸಿಗುವುದು.
ಧನು: ಮುಖ್ಯ ವಿಚಾರಗಳನ್ನು ಮರೆತು ಕಚೇರಿಯಲ್ಲಿ ಪೀಕಲಾಟ ಅನುಭವಿಸಬೇಕಾಗುತ್ತದೆ. ಆರ್ಥಿಕವಾಗಿ ಹೆಚ್ಚಿನ ಖರ್ಚಿನ ವೆಚ್ಚಗಳಾಗದಂತೆ ನೋಡಿಕೊಳ್ಳಿ. ನೂತನ ದಂಪತಿಗಳಿಗೆ ಶುಭ ವಾರ್ತೆ ಕಾದಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.
ಮಕರ: ವ್ಯಾಪಾರ,ವ್ಯವಹಾರಗಳಲ್ಲಿ ಹಿನ್ನಡೆ ಉಂಟಾದೀತು. ಆರ್ಥಿಕವಾಗಿ ಭವಿಷ್ಯಕ್ಕೆ ಇಂದೇ ತಯಾರಾಗಿ. ದಾಂಪತ್ಯದಲ್ಲಿ ಸುಖ, ಶಾಂತಿ ಪಡೆಯುವಿರಿ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗವಾಗಲಿದೆ.
ಕುಂಭ: ಮಹಿಳೆಯರಿಗೆ ವೃತ್ತಿರಂಗದಲ್ಲಿ ಮುಂಬಡ್ತಿ ಯೋಗವಿದೆ. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳು ನೆರವೇರಲಿದ್ದು, ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ.
ಮೀನ: ಶುಭ ಮಂಗಲ ಕಾರ್ಯಗಳಿಗಾಗಿ ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರ, ವ್ಯವಹಾರಗಳಿಗೆ ಅಡ್ಡಿ ಆತಂಕಗಳು ಎದುರಾಗಲಿವೆ. ಯಾವುದೇ ವಿಚಾರಕ್ಕೂ ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯಿರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ.