Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 29 ಆಗಸ್ಟ್ 2020 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಣ್ಣ ವಿಚಾರಕ್ಕೆ ಮಾನಸಿಕ ಉದ್ವೇಗಕ್ಕೊಳಗಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲ ಸಿಗಲಿದೆ.ಶೈಕ್ಷಣಿಕ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ವೃಷಭ: ನಿಮ್ಮನ್ನು ಕಡೆಗಣಿಸುವವರ ಬಗ್ಗೆ ಹೆಚ್ಚು ತಲೆಕಡಿಸಿಕೊಳ್ಳಬೇಕಾಗಿಲ್ಲ. ಚಾಡಿ ಮಾತುಗಳನ್ನು ಧನಾತ್ಮಕವಾಗಿ ಸ್ವೀಕರಿಸಿ. ಉದ್ಯೋಗ ಕ್ಷೇತ್ರದಲ್ಲಿ ಮೇಲ್ ಹಂತಕ್ಕೇರುವ ಯೋಗವಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮಿಥುನ: ದೇಹಾರೋಗ್ಯದಲ್ಲಿ ಏರುಪೇರು ಕಂಡುಬರಬಹುದು. ಮಾಡುವ ಕೆಲಸದಲ್ಲಿ ಶ್ರದ್ಧೆಯಿದ್ದರೆ ಯಶಸ್ಸು ಸಿಗುವುದು. ಆರ್ಥಿಕವಾಗಿ ಅಭಿವೃದ್ಧಿದಾಯಕ ಬೆಳವಣಿಗೆಗಳು ನಿರೀಕ್ಷಿಸಬಹುದು. ಕಾರ್ಯ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ದಾಯಾದಿಗಳಿಂದ ನಿಮ್ಮ ಕೆಲಸ ಕಾರ್ಯಗಳಿಗೆ ತೊಂದರೆಗಳು ಎದುರಾಗಲಿವೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಾಗಲಿದ್ದೀರಿ. ಸಾಮಾಜಿಕವಾಗಿ ಜನಮನ್ನಣೆ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಕೌಟುಂಬಿಕವಾಗಿ ನಾನಾ ರೀತಿಯ ಸಮಸ್ಯೆಗಳು ಎದುರಾದೀತು. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.

ಕನ್ಯಾ: ದೇಹಾರೋಗ್ಯದಲ್ಲಿ ಏರುಪೇರಾಗಿ ಭಯ ಕಾಡಲಿದೆ. ಸಂಗಾತಿಯ ಬಗ್ಗೆಯೂ ಚಿಂತೆಯಾಗುವುದು. ಹಿರಿಯರ ಸಲಹೆ ಪಾಲಿಸಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರುವುದು. ಬೇರೆಯವರ ಕೆಲಸದಲ್ಲಿ ಮೂಗು ತೂರಿಸಲು ಹೋದರೆ ಅವಮಾನ ಖಂಡಿತಾ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಶ್ಚಿಕ: ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಹಾಗಿದ್ದರೂ ಕಾರ್ಯದೊತ್ತಡ ತಪ್ಪದು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಮನಸ್ಸು ಮಾಡಲಿದ್ದಾರೆ.

ಧನು: ಮಕ್ಕಳ ಕೆಲವೊಂದು ನಿರ್ಧಾರಗಳು ನಿಮ್ಮ ಮನಸ್ಸಿಗೆ ಬೇಸರವುಂಟು ಮಾಡಬಹುದು. ಯಾರ ಬಗ್ಗೆಯೂ ಅತಿಯಾದ ನಿರೀಕ್ಷೆಗಳು ಬೇಡ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಅವಿವಾಹಿತ ಕನ್ಯಾಮಣಿಗಳಿಗೆ ಯೋಗ್ಯ ಸಂಬಂಧ ಕೂಡಿಬರುವುದು.

ಮಕರ: ಆರ್ಥಿಕ ಪರಿಸ್ಥಿತಿಯಲ್ಲಿ ಅನಿರೀಕ್ಷಿತವಾಗಿ ಏರುಪೇರಾಗಬಹುದು. ಖರ್ಚು ವೆಚ್ಚಗಳ ಬಗ್ಗೆ ನಿಯಂತ್ರಣವಿರಬೇಕು. ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ಸಲಹೆಗಳು ಉಪಯುಕ್ತವೆನಿಸಲಿದೆ.

ಕುಂಭ: ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ. ವಾಹನ ಸವಾರರು ಚಾಲನೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮನೆಗೆ ಬೇಕಾದ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

ಮೀನ: ವಿವಾಹಾದಿ ಮಾತುಕತೆಗಳಿಗೆ ಇದು ಸಕಾಲ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರು ವಾತ ಸಂಬಂಧೀ ಆರೋಗ್ಯ ಸಮಸ್ಯೆಗೊಳಗಾಗಲಿದ್ದಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಮೂರು ಹೆಸರಿನ ಹುಡುಗಿಯರನ್ನು ಕಣ್ಣುಮುಚ್ಚಿ ನಂಬಬಹುದು