Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 3 ಜನವರಿ 2021 (09:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ನಿಮ್ಮ ಕಾರ್ಯಭಾರ ಅಧಿಕವಾಗಲಿದೆ. ಗೃಹ ಸಂಬಂಧೀ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಸಹಕಾರಿಯಾಗುವಂತಹ ಯೋಜನೆ ಹಾಕಿಕೊಳ್ಳಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೇವರ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನಕ್ಕೇರುವ ಯೋಗ ಕೂಡಿಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆ.

ಕರ್ಕಟಕ: ಋಣಾತ್ಮಕ ಚಿಂತನೆಗಳಿಂದ ಮನಸ್ಸಿಗೆ ನಿರುತ್ಸಾಹ ಕಾಡಲಿದೆ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಿಬಂದೀತು. ಆಕಸ್ಮಿಕವಾಗಿ ಆತ್ಮೀಯರ ಭೇಟಿಯಿಂದ ಸಂತಸವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಸಿಂಹ: ವಿಲಾಸೀ ಸಾಮಗ್ರಿಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಮನೋಕಾಮನೆಗಳ ಪೂರ್ತಿ ಮಾಡಲಿದ್ದೀರಿ. ಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಲಿದ್ದೀರಿ. ಶುಭ ಮಂಗಲ ಕಾರ್ಯಗಳ ಸಿದ್ಧತೆ ನಡೆಸಲಿದ್ದೀರಿ. ಕಿರು ಓಡಾಟ ನಡೆಸುವಿರಿ.

ಕನ್ಯಾ: ಆತ್ಮೀಯರಿಂದ ನೆರವಿನ ಹಸ್ತದಿಂದ ಸಂಭಾವ್ಯ ಅಪಾಯದಿಂದ ತಪ್ಪಿಸಿಕೊಳ್ಳಲಿದ್ದೀರಿ. ನಿವೇಶನ ಖರೀದಿಗೆ ಯೋಗ ಕೂಡಿಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ಕೆಲವು ಸುಂದರ ಕ್ಷಣಗಳನ್ನು ಕಳೆಯಲಿದ್ದೀರಿ. ಆತ್ಮೀಯರ ಭೇಟಿ ನಿಮ್ಮ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ಲಾಭದಾಯಕ ವ್ಯವಹಾರಗಳ ಬಗ್ಗೆ ಚಿಂತನೆ ಮಾಡಲಿದ್ದೀರಿ. ಆರ್ಥಿಕವಾಗಿ ಚೇತರಿಕೆಗೆ ನಾನಾ ಮಾರ್ಗಗಳು ಗೋಚರವಾಗಲಿದೆ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಸ್ನೇಹಿತರ ಜೊತೆ ಕಿರು ಪ್ರವಾಸ ಮಾಡಲಿದ್ದೀರಿ.

ಧನು: ಎಷ್ಟೋ ದಿನಗಳ ಬಳಿಕ ಆಪ್ತೇಷ್ಟರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ. ಇಷ್ಟಮಿತ್ರರ ಜೊತೆಗೂಡಿ ಇಷ್ಟ ಭೋಜನ ಮಾಡಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ನಿಮ್ಮ ಯಶಸ್ಸನ್ನು ಯಾರೂ ತಡೆಯಲಾಗದು.

ಮಕರ: ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯಿಡಲಿದ್ದೀರಿ. ಮನೋನಿಗ್ರಹ ಅತೀ ಅಗತ್ಯ. ನಿರೀಕ್ಷಿತ ಮೂಲಗಳಿಂದ ಧನಾಗಮನಾಗಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ.

ಕುಂಭ: ಅನಗತ್ಯವಾಗಿ ವಿಚಾರಗಳಿಗೆ ನಿಮ್ಮ ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ‍್ಳಬೇಡಿ. ಸಂಗಾತಿಯ ಸಹಕಾರ ಸಿಗಲಿದೆ. ಉದರ ಸಂಬಂಧೀ ಸಣ್ಣ ಪುಟ್ಟ ಸಮಸ್ಯೆ ಕಂಡುಬಂದೀತು, ಉಪೇಕ್ಷೆ ಬೇಡ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮೀನ: ಮಾನಸಿಕವಾಗಿ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲಿದ್ದೀರಿ. ಪಾಲು ಬಂಡವಾಳ ಹೂಡಿಕೆಯಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಶುಭ ಕಾರ್ಯ ನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಸ್ನೇಹಿತರ ಕಷ್ಟಕ್ಕೆ ಜೊತೆಯಾಗಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ