ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗೆ ಅವಕಾಶಗಳು ತೆರೆದುಕೊಳ್ಳಲಿವೆ. ದೇಹಾರೋಗ್ಯದಲ್ಲಿ ಏರುಪೇರಾದೀತು. ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪಗಳಿಗೆ ಪಶ್ಚಾತ್ತಾಪ ಪಡಲಿದ್ದೀರಿ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.
ವೃಷಭ: ನಿಮ್ಮ ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಸ್ನೇಹಿತರೊಂದಿಗೆ ಸದ್ಯದಲ್ಲೇ ಪ್ರವಾಸ ಹೋಗಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಪ್ರಸ್ತಾಪಗಳು ಬರಲಿವೆ.
ಮಿಥುನ: ಹಿರಿಯರಿಗೆ ಬಹುದಿನಗಳಿಂದ ಕಾಡುತ್ತಿದ್ದ ಪುಣ್ಯ ಕ್ಷೇತ್ರದ ಭೇಟಿ ಕನಸು ನನಸಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಹಿಂದೆ ಮಾಡಿದ ತಪ್ಪುಗಳನ್ನು ಪರಾಮರ್ಶಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ.
ಕರ್ಕಟಕ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಸಾಧನೆಗೆ ಅವಕಾಶಗಳು ಎದುರಾಗಲಿವೆ. ಆಲಸ್ಯತನ ಬಿಟ್ಟು ಮುನ್ನಡೆಯಬೇಕು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಮಾತುಗಳಿಗೆ ಮನ್ನಣೆ ಸಿಗಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕೃಷಿಕರಿಗೆ ಫಸಲಿಗೆ ತಕ್ಕ ಬೆಲೆ ಸಿಗಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣವಿರಲಿ.
ಕನ್ಯಾ: ವೈಯಕ್ತಿಕವಾಗಿ ಕಷ್ಟನಷ್ಟಗಳನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನಪಲ್ಲಟವಾಗುವ ಭೀತಿಯಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ಕಾಲ ಕಾಯುವುದು ಒಳಿತು. ದೇವತಾ ಪ್ರಾರ್ಥನೆ ಮಾಡಿ.
ತುಲಾ: ನಿಮ್ಮ ನಡುವಳಿಕೆಯಿಂದಲೇ ಎಲ್ಲರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದೀರಿ. ಮನೆಗೆ ಅನಿರೀಕ್ಷಿತ ಬಂಧುಮಿತ್ರರ ಆಗಮನ ಸಾಧ್ಯತೆಯಿದೆ. ಖರ್ಚು ವೆಚ್ಚಗಳಾದೀತು.
ವೃಶ್ಚಿಕ: ಕಳೆದು ಹೋದ ವಸ್ತು ಮರಳಿ ಕೈ ಸೇರಿದ ಖುಷಿ ನಿಮ್ಮದಾಗಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಪ್ರಯತ್ನಬಲವಿದ್ದರೆ ಯಶಸ್ಸು ಅಸಾಧ್ಯವಾಗದು. ತಾಳ್ಮೆಯಿರಲಿ.
ಧನು: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ಮಾತಿನ ಮೇಲೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಮಕರ: ಅನಿರೀಕ್ಷಿತ ರೀತಿಯಲ್ಲಿ ಅಂದುಕೊಂಡ ಕೆಲಸಗಳು ನೆರವೇರಲಿದೆ. ವಿದ್ಯಾರ್ಥಿಗಳಿಗೆ ಸ್ವಪ್ರಯತ್ನದಿಂದಲೇ ಅಭಿವೃದ್ಧಿ ಹೊಂದಲಿದ್ದಾರೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಗಳಿಸುವ ಯೋಗವಿದೆ. ಕಿರು ಸಂಚಾರ ಮಾಡಲಿದ್ದೀರಿ.
ಕುಂಭ: ಹಿಂದೆ ಮಾಡಿದ ತಪ್ಪುಗಳನ್ನು ನೆನೆದು ಮನಸ್ಸು ಬೇಸರಗೊಳ್ಳಲಿದೆ. ವೃತ್ತಿರಂಗದಲ್ಲಿ ಹೆಚ್ಚಿನ ಪರಿಶ್ರಮ ಅಗತ್ಯ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರಲಿದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ಎದುರಾದೀತು.
ಮೀನ: ಮಹಿಳೆಯರಿಗೆ ಬಿಡುವಿಲ್ಲದ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಆದರೆ ಅಲಂಕಾರಿಕ ವಸ್ತುಗಳ ಖರೀದಿ ಮಾಡಲಿದ್ದೀರಿ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.