Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 26 ಫೆಬ್ರವರಿ 2021 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮುನ್ನಡೆಯಬೇಕೆಂದು ಮನಸ್ಸಿಗೆ ಅನಿಸಿದರೂ ದೈಹಿಕವಾಗಿ ಸೋತ ಮನೋಭಾವ ಕಾಡಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ವೃತ್ತಿರಂಗದಲ್ಲಿ ಮುನ್ನಡೆಗೆ ಸಹಕಾರಿಯಾದ ವಾತಾವರಣವಿರಲಿದೆ. ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಿಥುನ: ದೇಹಾರೋಗ್ಯದಲ್ಲಿ ಇದುವರರೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಬರಲಿದೆ. ದೇವತಾ ಕಾರ್ಯಗಳಿಗಾಗಿ ಧನ ವಿನಿಯೋಗ ಮಾಡಲಿದ್ದೀರಿ. ಆರ್ಥಿಕವಾಗಿ ಏರುಪೇರಾದೀತು, ಎದುರಿಸಲು ಸಿದ್ಧರಾಗಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಅನಿರೀಕ್ಷಿತ ರೀತಿಯಲ್ಲಿ ನಿಮ್ಮ ಕಾರ್ಯ ಸಾಧನೆಯಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ಸಿಗಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಓಡಾಟ ನಡೆಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಸಿಂಹ: ಅಡೆತಡೆಗಳಿದ್ದರೂ ಅಂತಿಮವಾಗಿ ನಿಮ್ಮ ಕಾರ್ಯಸಾಧನೆಯಾಗಲಿದೆ. ಆರ್ಥಿಕವಾಗಿ ಆದಾಯಕ್ಕಿಂತ ಖರ್ಚು ವೆಚ್ಚವಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆ ತಕ್ಕ ಉತ್ತಮ ಫಲಿತಾಂಶ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ ಕಾದಿದೆ.

ಕನ್ಯಾ: ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಆದಾಯವಿದ್ದರೂ ಖರ್ಚುಗಳೂ ಅಷ್ಟೇ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ.

ತುಲಾ: ವ್ಯವಹಾರದಲ್ಲಿ ಕಂಡುಬರುವ ತೊಂದರೆಗಳನ್ನು ನಿವಾರಿಸಲು ಕ್ರಿಯಾತ್ಮಕವಾಗಿ ಯೋಚನೆ ಮಾಡಲಿದ್ದೀರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಯೋಚನೆ ಮಾಡಲಿದ್ದೀರಿ. ಕಿರು ಓಡಾಟ ನಡೆಸಲಿದ್ದೀರಿ.

ವೃಶ್ಚಿಕ: ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಪ್ರೇಮಿಗಳಿಗೆ ಮನೆಯವರ ವಿರೋಧ ವ್ಯಕ್ತವಾಗಲಿದೆ. ಮಾತಿನ ಮೇಲೆ ನಿಗಾ ಇರಲಿ, ತಾಳ್ಮೆ ಸಂಯಮ ಅಗತ್ಯ.

ಧನು: ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದ್ದು, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಹೊಸ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇಹಾರೋಗ್ಯದಲ್ಲಿ ಕಂಡುಬರುವ ಸಣ್ಣ ಪುಟ್ಟ ಏರುಪೇರುಗಳ ಬಗ್ಗೆ ಉಪೇಕ್ಷೆ ಬೇಡ.

ಮಕರ: ನಿಮ್ಮ ಮುನ್ನಡೆಗೆ ಸಹಕಾರಿಯಾಗುವಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸಾಂಸಾರಿಕವಾಗಿ ಸುಖ ಶಾಂತಿ ಇರಲಿದೆ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

ಕುಂಭ: ವೃತ್ತಿರಂಗದಲ್ಲಿ ಹೊಸಬಗೆಯ ಅವಕಾಶಗಳು ಒದಗಿಬರಲಿವೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ವ್ಯಾಪಾರ, ವ್ಯವಹಾರದಲ್ಲಿ ನಿಮ್ಮ ಆದಾಯ ದ್ವಿಗುಣವಾಗಲಿದೆ. ಹೊಸ ಕೆಲಸಗಳಿಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ಸಾಂಸಾರಿಕವಾಗಿ ಸಿಹಿ ಸುದ್ದಿಯೊಂದನ್ನು ಕಾಡಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಈ ರಾಶಿಯವರಿಗೆ ರೋಗಗಳ ಭಾದೆ ಹೆಚ್ಚಾಗಿ ಕಾಡುತ್ತದೆ