ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಕ್ಷುಲ್ಲುಕ ವಿಚಾರಕ್ಕೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಾದೀತು. ಎಚ್ಚರಿಕೆಯಿಂದಿರಿ.
ವೃಷಭ: ಆಸ್ತಿ ಖರೀದಿ ವಿಚಾರವಾಗಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮೇಲುಗೈ ಸಾಧಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.
ಮಿಥುನ: ಕೃಷಿಕರಿಗೆ ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭವಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಹೊಸ ಯೋಜನೆಗಳಿಗೆ ಕೈಹಾಕಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಚಿಂತೆ ಬೇಡ.
ಕರ್ಕಟಕ: ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಆದರೆ ಖರ್ಚು ವೆಚ್ಚಗಳು ಹಿಡಿತ ತಪ್ಪದಂತೆ ಎಚ್ಚರಿಕೆ ವಹಿಸಿ. ಸಂಗಾತಿಯ ಪ್ರೀತ್ಯಾದಾರಗಳಿಗೆ ಪಾತ್ರರಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಸಿಂಹ: ಇಷ್ಟಮಿತ್ರರ ಆಗಮನ, ಭೋಜನದಿಂದ ಮನಸ್ಸಿಗೆ ಸಂತಸ ಸಿಗಲಿದೆ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು.
ಕನ್ಯಾ: ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾಗಲಿದ್ದು, ಆತಂಕಕ್ಕೊಳಗಾಗದಿರಿ. ಲಾಭಾಪೇಕ್ಷೆಯಿಲ್ಲದೇ ಮಾಡುವ ಕೆಲಸಗಳಿಗೆ ನೆಮ್ಮದಿ ಸಿಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳು ಅರ್ಧಕ್ಕೇ ನಿಂತು ಹೋದೀತು. ತಾಳ್ಮೆಯಿರಲಿ.
ತುಲಾ: ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಯಿರಲಿ. ನಿಮ್ಮ ಎಲ್ಲಾ ಸಮಸ್ಯೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವುದು ಸೂಕ್ತ. ವ್ಯಾಪಾರಿ ವರ್ಗದವರಿಗೆ ತಕ್ಕ ಬೆಲೆ ಸಿಗಲಿದ್ದು, ಆರ್ಥಿಕವಾಗಿ ಮುನ್ನಡೆ ಸಿಗಲಿದೆ.
ವೃಶ್ಚಿಕ: ಮಾಡಿದ ಕೆಲಸಕ್ಕೆ ಸೂಕ್ತ ಪ್ರತಿಫಲ ಸಿಗದೇ ಮನಸ್ಸಿಗೆ ಬೇಸರವಾಗಲಿದೆ. ಕಾರ್ಯರಂಗದಲ್ಲಿ ಕ್ರಿಯಾತ್ಮಕ ಯೋಚನೆಗಳು ಫಲಕೂಡಲಿವೆ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ. ಚಿಂತೆ ಬೇಡ.
ಧನು: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಕಾರ್ಯಸಾಧನೆಗಾಗಿ ಹೊಸ ಜನರ ಭೇಟಿಯಾಗಲಿದ್ದೀರಿ. ಮನೆ ರಿಪೇರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಮಕರ: ಮನಸ್ಸಿನ ಮಾತುಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಅಡೆತಡೆಗಳು ಬಂದೀತು. ಆದರೆ ತಾಳ್ಮೆಯಿರಲಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.
ಕುಂಭ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ ನಿರೀಕ್ಷಿಸಬಹುದು. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ.
ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ತರಕ್ಕೇರುವ ಯೋಗ ಕಂಡುಬರಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ನಿರುದ್ಯೋಗಿಗಳಿಗೆ ಸ್ವ ಉದ್ಯೋಗದಿಂದ ಲಾಭವಾದೀತು.