ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 23 ಏಪ್ರಿಲ್ 2021 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು, ಬಾಕಿ ಹಣ ಪಾವತಿಯಾಗಲಿದೆ. ಸಾಂಸಾರಿಕವಾಗಿ ಅನೇಕ ತಾಪತ್ರಯಗಳು ತಪ್ಪಿದ್ದಲ್ಲ. ಸಂಬಂಧಗಳನ್ನು ನಾಜೂಕಾಗಿ ನಿಭಾಯಿಸಿ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಲಿದೆ.

ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಲಿದ್ದೀರಿ. ಕಟ್ಟಡ ಕಾಮಗಾರಿ ಕಾರ್ಮಿಕರಿಗೆ ಕೆಲಸ ಕಾರ್ಯಕ್ಕೆ ತೊಂದರೆಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಸಾಕಷ್ಟು ಧನಾಗಮನವಿದ್ದರೂ ಅಷ್ಟೇ ಖರ್ಚು ವೆಚ್ಚಗಳೂ ಕಂಡುಬರಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಹಿಂದೆ ಮಾಡಿದ ತಪ್ಪುಗಳಿಗೆ ಪಶ್ಚಾತ್ತಾಪಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಉದಾಸೀನತೆ ಸಲ್ಲದು.

ಕರ್ಕಟಕ: ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಪ್ರಭಾವದಿಂದ ನಿಮ್ಮ ಕೆಲಸ ಮಾಡಿಸಿಕೊಳ‍್ಳುತ್ತೀರಿ. ಆದರೆ ನಿಮ್ಮ ಏಳಿಗೆ ಬಗ್ಗೆ ಅಸೂಯೆಪಡುವವರಿರುತ್ತಾರೆ ಎಚ್ಚರಿಕೆಯಿರಲಿ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದೀರಿ.

ಸಿಂಹ: ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅಡ್ಡಿ ಆತಂಕಗಳಿದ್ದರೂ ಅಂತಿಮವಾಗಿ ನಿಮ್ಮ ಕಾರ್ಯಸಾಧನೆಯಾದೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಆದರೂ ನಿಮ್ಮ ಕ್ರಿಯಾಶೀಲತೆಯಿಂದಾಗಿ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ತಾಳ್ಮೆಯಿರಲಿ.

ತುಲಾ: ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಕೃಷಿಕರಿಗೆ ಬೆಳೆದ ಬೆಳೆ ಲಾಭ ತಂದುಕೊಡಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ವೈಯಕ್ತಿಕ ಸಮಸ್ಯೆಗಳನ್ನು ನೀವಾಗಿಯೇ ಬಗೆಹರಿಸಿಕೊಳ್ಳಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ ಹೆಚ್ಚಲಿದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಧನು: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಮನೆಯ ಇತರ ಸದಸ್ಯರಿಗೆ ಇಷ್ಟವಾಗದೇ ಹೋಗಬಹುದು. ಆದರೆ ನೀವು ಇನ್ನೊಬ್ಬರ ಮಾತು ಕೇಳಿ ನಿರ್ಧಾರ ಬದಲಾಯಿಸುವ ಜಾಯಮಾನದವರಲ್ಲ. ತಾಳ್ಮೆ, ಸಂಯಮವಿರಲಿ.

ಮಕರ: ನೆರೆಹೊರೆಯವರೊಂದಿಗೆ ವರ್ತಿಸುವಾಗ ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಸೂಕ್ತ.

ಕುಂಭ: ಕೌಟುಂಬಿಕವಾಗಿ ಸಹೋದರರ ನಡುವೆ ಭಿನ್ನಾಭಿಪ್ರಾಯಗಳಾಗಬಹುದು. ಹಿರಿಯರ ಸಲಹೆಗಳನ್ನು ಪಾಲಿಸಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಕಿರು ಓಡಾಟ ನಡೆಸುವಿರಿ.

ಮೀನ: ಕಟ್ಟಡ ಕಾಮಗಾರಿ ನಿರ್ಮಾಣ ಕೆಲಸಗಳಿಗೆ ಕೈ ಹಾಕಲು ಕೆಲವು ದಿನ ಕಾಯುವದು ಒಳಿತು. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments