Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 12 ಮೇ 2021 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿನ ಗೊಂದಲಗಳು ನಿಧಾನವಾಗಿ ಪರಿಹಾರವಾಗಲಿದೆ. ಬರುವಂತಹ ಸಮಸ್ಯೆಗಳನ್ನು ಕ್ರಿಯಾತ್ಮಕವಾಗಿ ಪರಿಹರಿಸಲಿದ್ದೀರಿ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ತಾಳ್ಮೆಯಿರಲಿ.

ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ತಾಳ್ಮೆಯ ಪರೀಕ್ಷೆ ನಡೆಯಲಿದೆ. ಮೇಲಧಿಕಾರಿಗಳ ಕಿರಿ ಕಿರಿ ಅಸಹನೆ ಉಂಟು ಮಾಡೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಕಿರು ಓಡಾಟ ನಡೆಸಲಿದ್ದೀರಿ.

ಮಿಥುನ: ಸಾಂಸಾರಿಕವಾಗಿ ಪರಸ್ಪರ ಹೊಂದಾಣಿಕೆಯಿದ್ದರೆ ಯಾವುದೇ ಸಮಸ್ಯೆ ಬರದು. ಕುಟುಂಬ ಸದಸ್ಯರ ಮಾತಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾದೀತು. ಮನೆಯಲ್ಲಿ ನಡೆಯಬೇಕಿದ್ದ ಮಂಗಲ ಕಾರ್ಯಗಳು ಮುಂದೂಡಿಕೆಯಾಗಲಿದೆ.

ಸಿಂಹ: ಸಕಾಲದಲ್ಲಿ ಧನಾಗಮನವಾಗುವುದರಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆರ್ಥಿಕವಾಗಿ ಲೆಕ್ಕಾಚಾರ ತಪ್ಪದಂತೆ ನೋಡಿಕೊಳ್ಳಿ.

ಕನ್ಯಾ: ಅನಗತ್ಯವಾಗಿ ಹಿರಿಯರೊಡನೆ ವಾದ ವಿವಾದ ಮಾಡಿಕೊಳ್ಳಲು ಹೋಗಬೇಡಿ. ವೃತ್ತಿರಂಗದಲ್ಲಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಕ್ಕಳಿಂದ ಸಂತಸ ಸಿಗಲಿದೆ.

ತುಲಾ: ನೀವು ಎಷ್ಟೇ ಪ್ರಯತ್ನಪಟ್ಟರೂ ಅದಕ್ಕೆ ತಕ್ಕ ಫಲ ಸಿಗುತ್ತಿಲ್ಲ ಎಂಬ ನಿರಾಸೆ ನಿಮ್ಮನ್ನು ಕಾಡಲಿದೆ. ದೂರ ಪ್ರಯಾಣಗಳನ್ನು ಮುಂದೂಡಬೇಕಾಗುತ್ತದೆ. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ.

ವೃಶ್ಚಿಕ: ಆರ್ಥಿಕವಾಗಿ ಹಣಕಾಸಿನ ಹರಿವಿನಿಂದಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ.

ಧನು: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವ್ಯಾಪಾರಿಗಳು, ಹೂಡಿಕೆ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆಯಾದೀತು. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು.

ಮಕರ: ಆರ್ಥಿಕವಾಗಿ ಹಿನ್ನಡೆಯಾದರೂ ವ್ಯವಹಾರದಲ್ಲಿ ತಕ್ಕಮಟ್ಟಿನ ಮುನ್ನಡೆ ಸಿಗಲಿದೆ. ನಿಮ್ಮ ಪ್ರಯತ್ನ ಶೀಲತೆಗೆ ಮೆಚ್ಚುಗೆ ವ್ಯಕ್ತವಾಗಲಿದೆ. ಅನವಶ್ಯಕ ಸಂಘರ್ಷಗಳಿಗೆ ಎಡೆಮಾಡಿಕೊಡದಿರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಕುಂಭ: ನಿಮ್ಮದಲ್ಲದ ವಸ್ತುವಿನ ಮೇಲೆ ವ್ಯಾಮೋಹ ಬೇಡ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸುವ ಯೋಗ ಕೂಡಿಬರಲಿದೆ. ಇಷ್ಟಮಿತ್ರರ ಜೊತೆಗಿನ ಮಾತುಕತೆ ಮನಸ್ಸಿಗೆ ಸಂತಸ ನೀಡಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಆದಾಯ ಹೆಚ್ಚಳಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ನೆರೆಹೊರೆಯವರ ಸಹಾಯ ಪಡೆಯಬೇಕಾಗಬಹುದು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ