Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 10 ಜುಲೈ 2021 (08:29 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮಗೆ ಅರಿವಿಲ್ಲದೇ ಆಗುವ ತಪ್ಪುಗಳಿಂದ ತೊಂದರೆ ಎದುರಿಸಬೇಕಾಗಬಹುದು. ಆತ್ಮೀಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಹಿರಿಯರ ಸಲಹೆಗಳು ಪಥ್ಯವಾಗದೇ ಹೋದೀತು. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ನಿಮ್ಮ ಕೆಲಸಗಳಿಗೆ ಪ್ರಶಂಸೆ ಸಿಗಲಿದೆ. ನಿಮ್ಮ ಏಳಿಗೆ ಇತರರ ಅಸೂಯೆಗೆ ಕಾರಣವಾಗಬಹುದು. ತಾಳ್ಮೆ, ಸಂಯಮದಿಂದ ನಡೆದುಕೊಳ್ಳಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ವಾಹನ ಸವಾರರಿಗೆ ಅಪಘಾತದ ಭಯವಿದ್ದು, ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡ ಕೆಲಸಗಳು ನೆರವೇರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಕಠಿಣ ಪರಿಶ್ರಮಪಟ್ಟರೆ ಮಾತ್ರ ಫಲ ಸಿಗಲಿದೆ. ವ್ಯಾಪಾರಿಗಳಿಗೆ ಅಡೆತಡೆಗಳು ನಿವಾರಣೆಯಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು.

ಸಿಂಹ: ನಿಮ್ಮ ಕೆಲವು ನೇರ ಮಾತುಗಳು ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟುಮಾಡೀತು. ಇತರರ ಮೇಲೆ ಅತಿಯಾದ ನಿರೀಕ್ಷೆ ಬೇಡ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡುವಿರಿ.

ಕನ್ಯಾ: ವೈಯಕ್ತಿಕ ವಿಚಾರಗಳನ್ನು ಮೂರನೆಯವರ ಎದುರು ತೆರೆದುಕೊಳ್ಳುವುದು ಬೇಡ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ತುಲಾ: ಇಲ್ಲ ಸಲ್ಲದ ಚಿಂತೆಗಳಿಂದ ಮನಸ್ಸಿಗೆ ಬೇಸರವುಂಟಾದೀತು. ನಿರ್ಧಾರಗಳನ್ನು ಕೈಗೊಳ್ಳುವಾಗ ಗೊಂದಲಗಳು ಕಂಡುಬರಲಿದೆ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ.

ವೃಶ್ಚಿಕ: ಆರ್ಥಿಕವಾಗಿ ಸಂಕಷ್ಟಗಳು ಎದುರಾಗಲಿವೆ. ಭವಿಷ್ಯಕ್ಕಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧ ಒದಗಿಬರಲಿದೆ.

ಧನು: ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ನಿಮಗೇ ತಿರುಗುಬಾಣವಾದೀತು. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ಹಠ ಕಿರಿ ಕಿರಿ ತಂದೀತು. ದಾಯಾದಿ ಕಲಹಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ವ್ಯವಾಹರದಲ್ಲಿ ಪೈಪೋಟಿ ಎದುರಿಸಲು ಸಿದ್ಧರಾಗಿ. ಯಾವುದೇ ಸವಾಲುಗಳನ್ನು ಎದುರಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ತಾಳ್ಮೆ, ಸಂಯಮವಿರಲಿ.

ಕುಂಭ: ಕೌಟುಂಬಿಕವಾಗಿ ನೀವು ಕೈಗೊಳ್ಳುವ ನಿರ್ಧಾರಗಳು ಮಹತ್ವ ಪಡೆಯಲಿದೆ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಕ್ಕೀತು. ಮಾನಸಿಕವಾಗಿ ಋಣಾತ್ಮಕ ಯೋಚನೆಗಳು ಬಾರದಂತೆ ಎಚ್ಚರಿಕೆ ವಹಿಸಿ.

ಮೀನ: ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ವಿದ್ಯಾರ್ಥಿಗಳಿಗೆ ಭವಿಷ್ಯದ ದೃಷ್ಟಿಯಿಂದ ಹೊಸ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು. ಕುಲದೇವರ ಪ್ರಾರ್ಥಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ