ಮಿಥುನ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲು ಇದು ಸಕಾಲ. ಸನ್ಮಿತ್ರರು ಸಕಾಲದಲ್ಲಿ ನೀಡುವ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕಿರು ಸಂಚಾರ ಮಾಡುವಿರಿ.
ಕರ್ಕಟಕ: ಬಿಡುವಿನ ದಿನದ ಖುಷಿ ಅನುಭವಿಸಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ ಉದರ ಸಂಬಂಧೀ ಅನಾರೋಗ್ಯ ಕಾಡೀತು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.
ಸಿಂಹ: ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದ್ದು, ಪ್ರತಿಷ್ಠೆ ಹೆಚ್ಚಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.
ಕನ್ಯಾ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಾಂಸಾರಿಕವಾಗಿ ಸುಂದರ ದಿನವಾಗಿದ್ದು, ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಕೊಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.
ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ವೃಶ್ಚಿಕ: ಹೆಚ್ಚಿನ ಕಾರ್ಯಭಾರದಿಂದ ದೇಹಾಯಾಸವಾಗುವ ಸಂಭವವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಬಹುದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ಸಿಗಲಿದೆ. ಗೃಹ ಸಂಬಂಧೀ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.
ಧನು: ಬೇರೆಯವರ ವಿಚಾರಗಳಿಗೆ ತಲೆಕೆಡಿಸಿಕೊಂಡು ಅನಗತ್ಯ ಗೊಂದಲಕ್ಕೀಡಾಗಬೇಡಿ. ಮಹಿಳೆಯರಿಗೆ ತವರಿನ ಕಡೆಯವರನ್ನು ಭೇಟಿಯಾಗುವ ಯೋಗವಿದೆ. ಇಷ್ಟ ಭೋಜನ ಮಾಡಲಿದ್ದೀರಿ. ದೇವಾಲಯ ಸಂದರ್ಶಿಸುವಿರಿ.
ಮಕರ: ವ್ಯಾವಹಾರಿಕವಾಗಿ ಇದುವರೆಗೆ ನಿಮಗಿದ್ದ ತೊಂದರೆಗಳು ನಿವಾರಣೆಯಾಗಲಿವೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
ಕುಂಭ: ಮನಸ್ಸಿನಲ್ಲಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಮೀನ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ನಿಮ್ಮ ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.