Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 26 ಸೆಪ್ಟಂಬರ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಹಾರದಲ್ಲಿ ಪಾರದರ್ಶಕತೆಗೆ ಅದ್ಯತೆ ನೀಡಿ. ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ಸಾಂಸಾರಿಕವಾಗಿ ತಾಳ್ಮೆಯಿಂದ ವ್ಯವಹರಿಸಿ.

ವೃಷಭ: ಎಷ್ಟೇ ಹಣ ಸಂಪಾದನೆ ಮಾಡಿದರೂ ಏನೋ ಒಂದು ಅತೃಪ್ತಿ ಕಾಡಲಿದೆ.  ಕಾರ್ಯರಂಗದಲ್ಲಿ ನಿರೀಕ್ಷಿತ ಮುನ್ನಡೆಯಿರಲಿದೆ. ಆತ್ಮೀಯರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ನಿಮ್ಮ ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ಅವಿವಾಹಿತರಿಗೆ ಸೂಕ್ತ ಸಂಬಂಧಗಳು ಕೂಡಿಬರುವ ಸಮಯ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಪೋಷಕರ ಬಹುದಿನಗಳ ಕನಸು ನನಸು ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಸಿಗಲಿದೆ.

ಸಿಂಹ: ಬೇರೆಯವರ ಜೀವನದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋದರೆ ಸಮಸ್ಯೆಗಳೇ ಎದುರಾದೀತು. ವ್ಯಾಪಾರಸ್ಥರು ಒಳ್ಳೆಯ ದಿನಕ್ಕಾಗಿ ಕಾಯಲೇಬೇಕು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಸಹೋದ್ಯೋಗಿಗಳ ಸಹಕಾರದಿಂದ ನಿಮ್ಮ ಕೆಲಸಗಳು ಸುಸ್ರೂತ್ರವಾಗಿ ನಡೆಯಲಿದೆ. ಅಧ್ಯಯನಶೀಲರಿಗೆ ಹೊಸ ವಿಚಾರಗಳು ಹೊಳೆಯಲಿವೆ. ಮಕ್ಕಳ ಸಂತೋಷಕ್ಕಾಗಿ ಕೆಲವು ಕೆಲಸ ಮಾಡಬೇಕಾಗುತ್ತದೆ. ಚಿಂತೆ ಬೇಡ.

ತುಲಾ: ಉದ್ಯೋಗ, ವ್ಯವಹಾರ ಸಂಬಂಧ ಕಿರು ಸಂಚಾರ ಮಾಡಬೇಕಾಗುತ್ತದೆ. ವ್ಯವಹಾರ ಸಂಬಂಧವಾದ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನ ಸಾಧ್ಯತೆ. ದೇವರ ಪ್ರಾರ್ಥನೆ ಮರೆಯದಿರಿ.

ವೃಶ್ಚಿಕ: ನಿಮ್ಮ ಇಷ್ಟ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ಸಾಂಸಾರಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಉದಾಸೀನ ಪ್ರವೃತ್ತಿ ತೊರೆಯಬೇಕಾಗುತ್ತದೆ. ಅನಗತ್ಯ ಚಿಂತೆ ಬೇಡ.

ಧನು: ಆರ್ಥಿಕವಾಗಿ ಸಮೃದ್ಧಿ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಕಾರ್ಯಕ್ಷೇತ್ರದಲ್ಲಿ ಸ್ವಂತ ನಿರ್ಣಯ ಮಾಡಬೇಕಾಗುತ್ತದೆ.  ಭೂಮಿ, ವಾಹನ ಖರೀದಿ ಪ್ರಯತ್ನದಲ್ಲಿ ಮುನ್ನಡೆಯಿರಲಿದೆ.

ಮಕರ: ಅನಿರೀಕ್ಷಿತ ಧನಾಗಮನದಿಂದ ಖುಷಿಯಾಗಲಿದ್ದು, ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು.

ಕುಂಭ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಸ್ವಯಂ ವೃತ್ತಿಯವರಿಗೆ ಮುನ್ನಡೆಗೆ ಅವಕಾಶಗಳು ಸಿಗಲಿವೆ. ದೂರದ ನೆಂಟರಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ.

ಮೀನ: ಸಾಂಸಾರಿಕ ವಿಚಾರದಲ್ಲಿ ಅನಗತ್ಯ ಮಾತುಗಳು, ದುಡುಕಿನ ನಿರ್ಧಾರಗಳು ಸಂಬಂಧಗಳನ್ನು ಹಾಳು ಮಾಡೀತು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ವಿರಾಮ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ