Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 11 ಅಕ್ಟೋಬರ್ 2021 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಕಾರ್ಯನಿಮಿತ್ತ ಪರರ ಸಹಾಯ ಪಡೆಯುವುದು ಅನಿವಾರ್ಯವಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವರ ಪ್ರಾರ್ಥನೆ ಮಾಡಿ.

ವೃಷಭ: ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಸುಬ್ರಮಣ್ಯ ದೇವರ ಪ್ರಾರ್ಥನೆ ಮಾಡಿದರೆ ಉತ್ತಮ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಸಾಲಗಾರರಿಂದ ಮುಕ್ತರಾಗಲಿದ್ದಾರೆ.

ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ ಫಲ ಪಡೆಯಲು ಕೆಲವು ದಿನ ಕಾಯುವುದು ಅನಿವಾರ್ಯವಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ನಡೆಸಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕರ್ಕಟಕ: ಕೌಟುಂಬಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಅಗತ್ಯ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುವುದು. ಚಿಂತೆ ಬೇಡ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿಗಳು ನಿಮ್ಮ ಹೆಗಲಿಗೇರಲಿವೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ ಉದರ ಸಂಬಂಧೀ ಸಮಸ್ಯೆಗಳಾದೀತು. ಇಷ್ಟಮಿತ್ರ ಭೇಟಿಯಾಗುವ ಯೋಗ ಕೂಡಿಬರುವುದು.

ಕನ್ಯಾ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಆಸ್ತಿ ಖರೀದಿ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಅರ್ಧಕ್ಕೇ ನಿಂತಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಪೂರ್ವಾಪರ ತಿಳಿದು ಇನ್ನೊಬ್ಬರಿಗೆ ಸಹಾಯ ಮಾಡುವುದು ಒಳಿತು. ಉದ್ಯೋಗ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಬದಲಾವಣೆಗಳಿಗೆ ಹೊಂದಿಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.

ವೃಶ್ಚಿಕ: ಮನಸ್ಸಿಗೆ ಖುಷಿಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗುವುದು. ಹಿರಿಯರಿಗೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ಕೊಡುವ ಯೋಗ ಕೂಡಿಬರಲಿದೆ.

ಧನು: ಅನಿರೀಕ್ಷಿತವಾಗಿ ಧನಹಾನಿಯಾಗುವ ಸಾಧ್ಯತೆಯಿರುತ್ತದೆ. ನಿಮ್ಮ ಬೆನ್ನ ಹಿಂದೆ ಮಾಡುವ ಪಿತೂರಿಗಳು ಬೆಳಕಿಗೆ ಬರಲಿವೆ. ಸ್ವಯಂ ವೃತ್ತಿಯವರಿಗೆ ಲಾಭವಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆ. ಹೊಸ ಬದಲಾವಣೆಗೆ ಹೊಂದಿಕೊಳ್ಳಲು ಕಷ್ಟವಾದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ದೇವರ ಪ್ರಾರ್ಥನೆ ಮಾಡಿ.

ಕುಂಭ: ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ನಿರೀಕ್ಷಿಸಬಹುದು. ಕಿರು ಓಡಾಟ ನಡೆಸಲಿದ್ದೀರಿ.

ಮೀನ: ನಿಮ್ಮ ಮನಸ್ಸಿಗೆ ಅನಿಸಿದಂತೆ ಕೆಲಸ ಕಾರ್ಯಗಳನ್ನು ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ