Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 3 ನವೆಂಬರ್ 2021 (07:16 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.

ವೃಷಭ: ಗಣ್ಯರ ಭೇಟಿ ಮಾಡಲಿದ್ದು, ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಗ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಬೇರೆಯವರ ಬಗ್ಗೆ ಅನಗತ್ಯ ಮಾತು, ಚರ್ಚೆಗಳು ಬೇಡ. ನಿಮ್ಮ ವೃತ್ತಿರಂಗದಲ್ಲಿ ಸ್ಥಾನ ಮಾನ ಸುಧಾರಣೆಗೆ ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಕೌಟುಂಬಿಕವಾಗಿ ನಡೆಸುವ ಕೆಲವೊಂದು ನಿರ್ಧಾರಗಳು ವೈಯಕ್ತಿಕವಾಗಿ ನಿಮಗೆ ಕಿರಿ ಕಿರಿಯೆನಿಸೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.

ಸಿಂಹ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವ್ಯಾವಹಾರಿಕವಾಗಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಭೂಮಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ.

ಕನ್ಯಾ: ದೂರ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆಪ್ತರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ.

ತುಲಾ: ವ್ಯಾಪಾರಿಗಳಿಗೆ ನಿವ್ವಳ ಲಾಭ ಗಳಿಸಲು ಸಕಾಲ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಾತಿನ ಮೇಲೆ ಸಂಯಮವಿರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಬಹುದೂರದ ಸಂಬಂಧಿಗಳು ಹತ್ತಿರವಾಗಲಿದ್ದಾರೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದ್ದು, ಇಷ್ಟ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಧನು: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ನೆಂಟರಿಷ್ಟರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ.

ಕುಂಭ: ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಬೆಲೆ ಕೊಡುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ