Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 7 ನವೆಂಬರ್ 2021 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಹಂತಕ್ಕೇರುವ ಕನಸು ಸದ್ಯದಲ್ಲೇ ನನಸಾಗಲಿದೆ. ಎಷ್ಟೋ ದಿನಗಳ ನಂತರ ಪ್ರೀತಿ ಪಾತ್ರರ ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಆದರೂ ಸಾಂಸಾರಿಕವಾಗಿ ಕೆಲವೊಂದು ಸಂಘರ್ಷಗಳಾದೀತು.

ವೃಷಭ: ಮನಸ್ಸಿನಲ್ಲಿರುವ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವ ಯೋಗ ನಿಮ್ಮದಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಇಷ್ಟದೇವತಾ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ.

ಮಿಥುನ: ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿನ ದುಃಖ ಮರೆಯಬಹುದು. ದೇಹಾರೋಗ್ಯದ ಮೇಲೆ ಕಾಳಜಿಯಿರಲಿ. ವಾಹನ ಸವಾರರಿಗೆ ಅಪಘಾತದ ಭೀತಿಯಿದ್ದು, ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಉತ್ತಮ ಕೆಲಸಗಳು ಮಾಡಲು ಹೊರಟಾಗ ಅಡ್ಡಿ ಆತಂಕಗಳು ಸಹಜ. ಅದೆಲ್ಲವನ್ನೂ ಎದುರಿಸಲು ಸಂಗಾತಿಯ ಸಹಕಾರ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದೀತು. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಇಷ್ಟಮಿತ್ರರೊಂದಿಗೆ ಭೋಜನ ಸವಿಯುವ ಯೋಗ ನಿಮ್ಮದಾಗುವುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.

ಕನ್ಯಾ: ಆರ್ಥಿಕ ಅಡಚಣೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಹೊಸದಾಗಿ ಭೇಟಿಯಾಗುವ ಜನರಿಂದ ಒಳ್ಳೆಯ ವಿಚಾರಗಳನ್ನು ಕಲಿಯಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾದರೂ ಮಾನಸಿಕವಾಗಿ ನೆಮ್ಮದಿ ಸಿಗುವುದು.

ವೃಶ್ಚಿಕ: ಹಿರಿಯರ ಸಲಹೆಗಳನ್ನು ಕಡೆಗಣಿಸದಿರಿ. ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸಿಗೆ ಪರಿಶ್ರಮ ಪಡಲಿದ್ದೀರಿ. ಆಸ್ತಿ ವಿಚಾರದಲ್ಲಿ ಗುರುಹಿರಿಯರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ನಿರೀಕ್ಷಿತ ರೀತಿಯಲ್ಲಿ ಧನಾಗಮನವಾಗಲಿದ್ದು, ವ್ಯಾವಹಾರಿಕವಾಗಿ ಚೇತರಿಕೆ ಕಂಡುಬರಲಿದೆ. ಸಾಂಸಾರಿಕ ನೆಮ್ಮದಿಗಾಗಿ ಪ್ರಯತ್ನ ಪಡಲಿದ್ದೀರಿ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ.

ಮಕರ: ವ್ಯಾವಹಾರಿಕವಾಗಿ ಎಷ್ಟೇ ಯಶಸ್ಸು ಗಳಿಸಿದರೂ ಸಾಂಸಾರಿಕವಾಗಿ ಹೊಂದಾಣಿಕೆ ಗಳಿಸುವುದು ಕಷ್ಟವಾಗಲಿದೆ. ದೂರದ ಮಿತ್ರರನ್ನು ಭೇಟಿಯಾಗಲಿದ್ದೀರಿ. ಪಾಲುದಾರಿಕೆ ವ್ಯವಹಾರಗಳಿಂದ ಲಾಭ ಕಂಡುಕೊಳ್ಳಲಿದ್ದೀರಿ.

ಕುಂಭ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾದ ಅನಿವಾರ್ಯತೆ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ನೆರೆಹೊರೆಯವರಿಗೆ ನಿಮ್ಮ ಗುಟ್ಟುಗಳನ್ನು ತಿಳಿದುಕೊಳ್ಳುವ ಕುತೂಹಲವಿರುತ್ತದೆ. ತಾಳ್ಮೆಯಿರಲಿ.

ಮೀನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಉತ್ತಮ ವಾಕ್ಚತುರತೆಯಿಂದ ಎಲ್ಲರ ಗೌರವಕ್ಕೆ ಪಾತ್ರರಾಗಲಿದ್ದೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ