ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 9 ನವೆಂಬರ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಭವಿಷ್ಯದ ಯೋಜನೆಗಳಿಗೆ ಬುನಾದಿ ಹಾಕಲಿದ್ದೀರಿ. ವೈಯಕ್ತಿಕ ನಿಂದನೆ ಸಲ್ಲದು. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು.

ವೃಷಭ: ಪ್ರೀತಿ ಪಾತ್ರರ ಕಷ್ಟಗಳಿಗೆ ಜೊತೆ ನಿಲ್ಲಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು.

ಮಿಥುನ: ಮಾತಿನ ಚತುರತೆಯಿಂದ ಕಾರ್ಯಸಾಧನೆ ಮಾಡಿಕೊಳ್ಳಲಿದ್ದೀರಿ. ಹೊಸ ಜನರ ಭೇಟಿ ನಿಮ್ಮ ಕೆಲಸಕ್ಕೆ ಅನುಕೂಲ ಮಾಡಿಕೊಡಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ವೈಯಕ್ತಿಕ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಬಂದೀತು. ಹಣಕಾಸಿನ ಸಹಾಯಕ್ಕೆ ಮಿತ್ರರು ಒದಗಿಬರಲಿದ್ದಾರೆ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಸಿಂಹ: ಬಹುನಿರೀಕ್ಷಿತ ವಸ್ತು, ಕೆಲಸಗಳು ನಿಮ್ಮ ಕೈಗೆಟುಕಲಿದೆ. ಬೇರೆಯವರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ತಾಳ್ಮೆಯಿರಲಿ.

ಕನ್ಯಾ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಗಳು ಕೈ ಹಿಡಿಯಲಿವೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಸರಕಾರಿ ನೌಕರರಿಗೆ ಕಾರ್ಯದೊತ್ತಡ ಹೆಚ್ಚಾದೀತು. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ತುಲಾ: ವೃತ್ತಿರಂಗದಲ್ಲಿ ಶತ್ರುಗಳು ಹುಟ್ಟಿಕೊಳ್ಳಲಿದ್ದಾರೆ. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಧನು: ವ್ಯಾಪಾರ, ವಹಿವಾಟಿನಲ್ಲಿ ನಿರೀಕ್ಷಿತ ಮುನ್ನಡೆ, ಲಾಭ ಕಂಡುಬರಲಿದೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹಣಕಾಸಿನ ಲೆಕ್ಕಾಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಕೊಡಲಿದ್ದೀರಿ.

ಮಕರ: ಇತರರ ಮೇಲಿನ ನಿಮ್ಮ ಪ್ರೀತಿ, ಕಾಳಜಿಗಳಿಂದಾಗಿ ಎಲ್ಲರ ಆದರಕ್ಕೊಳಗಾಗಲಿದ್ದೀರಿ. ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಪ್ರತಿಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ವೈಯಕ್ತಿಕ ಜೀವನದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಸೇವೆ ಮಾಡಿ. ಮಕ್ಕಳಿಂದ ಸಂತೋಷದ ಸುದ್ದಿ ಆಲಿಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಮೀನ: ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಲಿದ್ದೀರಿ. ದೇಹಾರೋಗ್ಯದ ಕಡೆಗೆ ಗಮನವಿರಲಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಅಡಚಣೆ ಉಂಟಾದೀತು. ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಮುಂದಾಗಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಇಂದು ಶಿವನ ಈ ಮಂತ್ರವನ್ನು ತಪ್ಪದೇ ಓದಿ ಸಕಲ ಪಾಪ ಪರಿಹಾರವಾಗುತ್ತದೆ

ಮುಂದಿನ ಸುದ್ದಿ
Show comments