ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ದೇಹಾರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಸಾಂಸಾರಿಕವಾಗಿ ತಾಳ್ಮೆಯೇ ನಿಮ್ಮ ಅಸ್ತ್ರವಾಗಿರಲಿ. ಉದ್ಯೋಗ ಕ್ಷೇತ್ರದಲ್ಲಿ ಉತ್ಸಾಹದಿಂದ ಕೆಲಸ ನಿರ್ವಹಿಸಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.
ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನ ಮಾನ ವೃದ್ಧಿಯಾಗಲಿದ್ದು, ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಅಗತ್ಯ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಿಥುನ: ನಿಮ್ಮ ಕ್ರಿಯಾಶೀಲತೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾದೀತು. ದೂರದ ವ್ಯವಹಾರಗಳಲ್ಲಿ ಅನ್ಯರ ಸಹಾಯದಿಂದ ಪ್ರಗತಿ ಕಂಡುಬರಲಿದೆ.
ಕರ್ಕಟಕ: ನಿಮ್ಮ ಮಾತು ಇತರರಿಗೆ ಪಥ್ಯವಾಗದೇ ಹೋದೀತು. ತಾಳ್ಮೆ, ಸಂಯಮ ಅಗತ್ಯ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ಉತ್ತಮ ಅವಕಾಶಗಳು ತೋರಿಬರಲಿವೆ.
ಸಿಂಹ: ಸಾಂಸಾರಿಕವಾಗಿ ಸಾಮರಸ್ಯದ ಕೊರತೆ ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ವಿದೇಶೀ ಮೂಲಗಳಿಂದ ಧನಾಗಮನವಾಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ.
ಕನ್ಯಾ: ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಉತ್ಸಾಹ ಬರಲಿದೆ. ಭೂಮಿ, ವಾಹನಾದಿ ಖರೀದಿಯಿಂದ ಲಾಭವಾದೀತು. ದೇವತಾ ಪ್ರಾರ್ಥನೆ ಮರೆಯದಿರಿ.
ತುಲಾ: ಮಿತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯದ ಯೋಜನೆಗೆ ಪ್ಲ್ಯಾನ್ ಮಾಡಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ.
ವೃಶ್ಚಿಕ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ಅಡುಗೆ ಮನೆ ಕೆಲಸಗಳಲ್ಲಿ ಎಚ್ಚರಿಕೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.
ಧನು: ಜವಾಬ್ಧಾರಿಯುತ ಕೆಲಸದಿಂದಾಗಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಪ್ರೀತಿ ಪಾತ್ರರ ಭೇಟಿಗೆ ಮನಸ್ಸು ಹಾತೊರೆಯಲಿದೆ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವ ಬದಲು ಕಾರ್ಯಪ್ರವೃತ್ತರಾಗಿ.
ಮಕರ: ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಇನ್ನೊಬ್ಬರಿಗೆ ಸಾಲ ಕೊಡುವ ಮುನ್ನ ಎಚ್ಚರವಿರಲಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಜಾಗರೂಕತೆ ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಕುಂಭ: ದೂರದ ವ್ಯವಹಾರಗಳಿಂದ ಹೆಚ್ಚಿನ ಧನಲಾಭ ಕಂಡುಬರಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಹೊಸ ವ್ಯವಹಾರಗಳಿಗೆ ಕೈ ಹಾಕಲಿದ್ದೀರಿ. ಸಂಗಾತಿಯ ಬಹುದಿನಗಳ ಆಸೆ ಪೂರೈಸಲು ಮುಂದಾಗಲಿದ್ದೀರಿ.
ಮೀನ: ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಮನೆಯಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ಕೋರ್ಟು ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ.