ಮೇಷ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಮೂಡಲಿದೆ. ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಷಭ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷಕ್ಕೆ ದಾರಿ ಮಾಡಿಕೊಡಬೇಡಿ. ಹಿರಿಯರ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.
ಮಿಥುನ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಎಷ್ಟೋ ದಿನಗಳ ನಂತರ ಆಪ್ತರ ಭೇಟಿಯಾದ ಸಂತೋಷ ಸಿಗಲಿದೆ.
ಕರ್ಕಟಕ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ದಾಂಪತ್ಯ ಜೀವನದಲ್ಲಿ ಸುಖ ಸಮೃದ್ಧಿಗೆ ಕೊರತೆಯಿರದು. ಮಕ್ಕಳಿಂದ ಸಂತೋಷದ ವಾರ್ತೆ ಆಲಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.
ಸಿಂಹ: ಕುಟುಂಬ ಸದಸ್ಯರೊಂದಿಗೆ ಸುಂದರ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಧನಾಗಮನ ಹೆಚ್ಚಿಸಲು ಯೋಜನೆ ಹಾಕಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ನಿಮ್ಮ ಸ್ವಾಮಿನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಮೇಲಧಿಕಾರಿಗಳಿಂದ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.
ತುಲಾ: ಕುಟುಂಬದವರಿಗಾಗಿ ಕೆಲವೊಂದು ನಿರ್ಧಾರಗಳಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರುವುದು. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ.
ವೃಶ್ಚಿಕ: ನಿಮ್ಮ ಮಾತು ಇತರರ ಮೇಲೆ ಪ್ರಭಾವವುಂಟು ಮಾಡಲಿದೆ. ಹೊಸದಾಗಿ ಕೆಲಸಕ್ಕೆ ಸೇರಿಕೊಂಡವರಿಗೆ ಹೊಂದಾಣಿಕೆ ಕಷ್ಟವಾದೀತು. ಆದರೆ ಸಹೋದ್ಯೋಗಿಗಳ ಸಕಾಲದ ನೆರವು ನಿಮ್ಮನ್ನು ಕಷ್ಟದಿಂದ ಪಾರು ಮಾಡಲಿದೆ.
ಧನು: ಮಾತಿನ ಮೇಲೆ ನಿಗಾ ಇರಲಿ. ಇನ್ನೊಬ್ಬರ ಜೀವನದಲ್ಲಿ ಅತಿಯಾಗಿ ಆಸಕ್ತಿ ವಹಿಸುವುದು ಬೇಡ. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆಯಾಗಲಿದೆ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ. ದಿನದಂತ್ಯಕ್ಕೆ ಸಂತೋಷ ಸಿಗುವುದು.
ಮಕರ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಕಂಡುಬರಲಿದೆ. ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದೀರಿ. ಭೂಮಿ, ವಾಹನ ಖರೀದಿ ವ್ಯವಹಾರಗಳಲ್ಲಿ ಲಾಭವಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಕುಂಭ: ಕಾರ್ಯದೊತ್ತಡದಿಂದ ಪ್ರೀತಿ ಪಾತ್ರರಿಗೆ ಸಮಯ ಕೊಡಲಾಗುವುದಿಲ್ಲ ಎಂಬ ಬೇಸರ ಕಾಡೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಗೃಹಿಣಿಯರಿಗೆ ಕೊಂಚ ಬಿಡುವಿನ ದಿನ ಇದಾಗಿರಲಿದೆ.
ಮೀನ: ವೈಯಕ್ತಿಕ ಕಷ್ಟ-ನಷ್ಟಗಳನ್ನು ಆತ್ಮೀಯರೊಂದಿಗೆ ಹೇಳಿಕೊಂಡು ಹಗುರವಾಗಲಿದ್ದೀರಿ. ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.