ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಹಳೆಯ ನೆನಪುಗಳು ಕಾಡಿ ಬಂದು ನಿಮ್ಮ ಮನಸ್ಸಿಗೆ ಘಾಸಿ ಮಾಡೀತು. ಸಾಂಸಾರಿಕವಾಗಿ ತಾಳ್ಮೆ ಅತೀ ಅಗತ್ಯ. ಆರ್ಥಿಕವಾಗಿ ಸಕಾಲದಲ್ಲಿ ನೆರವು ಸಿಗಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ.
ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ತಕ್ಕ ಮನ್ನಣೆ ಸಿಗದೇ ಮನಸ್ಸಿಗೆ ಬೇಸರವಾದೀತು. ಆಸ್ತಿ ಖರೀದಿ ವಿಚಾರದಲ್ಲಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ವಹಿಸುವುದು ಸೂಕ್ತ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.
ಮಿಥುನ: ನಿಮ್ಮ ಮನಸ್ಸಿನ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಅವಕಾಶಗಳು ಸಿಗಲಿವೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭದಾಯಕ ದಿನಗಳಿವು.
ಕರ್ಕಟಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಸಾಧನೆಗೆ ಅಡ್ಡಿ ಆತಂಕಗಳು ಎದುರಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರಲಿದೆ. ಇನ್ನೊಬ್ಬರ ವಸ್ತುಗಳನ್ನು ಉಪಯೋಗಿಸುವಾಗ ಎಚ್ಚರಿಕೆ ಅಗತ್ಯ.
ಸಿಂಹ: ನಿಮ್ಮ ಮನಸ್ಸಿನಲ್ಲಿ ಮೂಡುವ ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಕನ್ಯಾ: ವ್ಯಾಪಾರಿ ವರ್ಗದವರಿಗೆ ಹಿತ್ರಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಸಂತೋಷ ನಿಮ್ಮದಾಗಲಿದೆ. ಚಿಂತೆ ಬೇಡ.
ತುಲಾ: ವಿಶೇಷ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಕಷ್ಟದಲ್ಲಿರುವ ನೆರೆಹೊರೆಯವರಿಗೆ ಸಹಾಯ ಹಸ್ತ ಚಾಚಲಿದ್ಧೀರಿ. ದೇವತಾ ಪ್ರಾರ್ಥನೆ ಮಾಡಿ.
ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿ ಪಡೆಯಲು ಮೇಲಧಿಕಾರಿಗಳ ಕೃಪಾಕಟಾಕ್ಷ ಪಡೆಯಲು ಪ್ರಯತ್ನಿಸಲಿದ್ದೀರಿ. ಪ್ರೇಮಿಗಳಿಗೆ ಇಂದು ಶುಭ ದಿನವಾಗಿರಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ.
ಧನು: ನೆರೆಹೊರೆಯವರು ನಿಮ್ಮ ಬಗ್ಗೆ ಏನು ಯೋಚಿಸುತ್ತಾರೋ ಎಂಬ ಭಯ ಕಾಡಲಿದೆ. ನಿಮ್ಮ ಗುಟ್ಟುಗಳು ರಟ್ಟಾಗದಂತೆ ಕಾಪಾಡಿಕೊಳ್ಳುವ ಹೊಣೆಯಿರಲಿದೆ. ವ್ಯಾಪಾರೀ ವರ್ಗದವರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.
ಮಕರ: ಬಂಧು ಜನರೊಂದಿಗೆ ಉಲ್ಲಾಸದ ಕ್ಷಣ ಕಳೆಯಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ದೇವತಾರಾಧನೆಯಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.
ಕುಂಭ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಸರಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬಂದೀತು. ತಾಳ್ಮೆಯಿರಲಿ.
ಮೀನ: ವೃತ್ತಿರಂಗದಲ್ಲಿ ಮುನ್ನಡೆಗೆ ಅವಕಾಶವಿದ್ದರೂ ಅದೃಷ್ಟ ಕೈ ಕೊಡಲಿದೆ. ಆದರೆ ನಿರಾಸೆಯಾಗುವುದು ಬೇಡ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರಲಿದೆ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.