Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 3 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವೃತ್ತಿರಂಗದಲ್ಲಿ ನಿಮ್ಮ ಸತತ ಪರಿಶ್ರಮವನ್ನು ಗುರುತಿಸಿ ತಕ್ಕ ಮನ್ನಣೆ ನೀಡಲಿದ್ದಾರೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ಸಹೋದರಿಯರಿಂದ ನಿಮ್ಮ ಮನಸ್ಸಿಗೆ ಸಂತೋಷ ತರುವ ಘಟನೆಗಳು ನಡೆಯಲಿದೆ. ಉದ್ಯೋಗ, ವ್ಯವಹಾರದಲ್ಲಿ ವಾದ-ವಿವಾದಗಳಾದೀತು. ಹಾಗಿದ್ದರೂ ನಿಮ್ಮ ಏಳಿಗೆ ತಡೆಯಲಾಗದು. ಆರ್ಥಿಕವಾಗಿ ಮುನ್ನಡೆಯಿರಲಿದೆ.

ಮಿಥುನ: ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನಿಮ್ಮ ಪ್ರಯತ್ನಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಆಲಿಸಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ವ್ಯಾಪಾರ, ಸ್ವಯಂ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಆರ್ಥಿಕವಾಗಿ ತುಸು ಚೇತರಿಕೆ ಕಂಡುಬರಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ನಿಮ್ಮ ಸಮಸ್ಯೆಗಳಿಗೆ ದೀರ್ಘ ಕಾಲೀನ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ಪ್ರೇಮಿಗಳು ಪರಸ್ಪರ ಸುಂದರ ಕ್ಷಣ ಕಳೆಯಲಿದ್ದಾರೆ. ವ್ಯಾವಹಾರಿಕವಾಗಿ ಮುನ್ನಡೆಯಿದ್ದರೂ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರುವುದು ಉತ್ತಮ.

ಕನ್ಯಾ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಬಹುದಿನಗಳ ನಂತರ ಅಂದುಕೊಂಡ ಕೆಲಸ ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಎಷ್ಟೋ ದಿನಗಳ ನಂತರ ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ.

ತುಲಾ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ. ಆಸ್ತಿ ವಿಚಾರದಲ್ಲಿ ಸಹೋದರ ಸಂಬಂಧಿಗಳೊಂದಿಗೆ ವಾದ ವಿವಾದಗಳಾಗದಂತೆ ಎಚ್ಚರಿಕೆ ವಹಿಸಿ. ತಾಳ್ಮೆ, ಸಂಯಮ ಅಗತ್ಯ.

ವೃಶ್ಚಿಕ: ಕುಟುಂಬ ಸದಸ್ಯರ ಸಹಕಾರದ ಕೊರತೆಯಿಂದ ಅಂದುಕೊಂಡ ಕೆಲಸ ಪೂರ್ತಿ ಮಾಡಲಾಗದೇ ಅಸಹಾಯಕತೆಗೊಳಗಾಗಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಧನು: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾಲೆಳೆಯುವವರಿಗೆ ತಕ್ಕ ಪಾಠ ಕಲಿಸಲಿದ್ದೀರಿ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮಕರ: ಸಮಾನ ಮನಸ್ಕರ ಭೇಟಿ, ಕೂಡಿಕಳೆಯುವ ಯೋಗ ನಿಮ್ಮದಾಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಕಂಡುಬಂದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಸರಕಾರಿ ಉದ್ಯೋಗಕ್ಕಾಗಿ ಶ್ರಮಿಸುತ್ತಿದ್ದರೆ ನಿಮ್ಮ ಪ್ರಯತ್ನಗಳಿಗೆ ಫಲ ಸಿಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕೆಲಸ ಕಾರ್ಯಗಳಲ್ಲಿ ನಿಮ್ಮ ತಲ್ಲೀನತೆಗೆ ತಕ್ಕ ಫಲ ಸಿಗಲಿದೆ. ದುಂದು  ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಸಂಗಾತಿಯ ಇಷ್ಟಕ್ಕೆ ಅನುಸಾರವಾಗಿ ನಿಮ್ಮ ನಿರ್ಧಾರಗಳಲ್ಲಿ ಬದಲಾವಣೆ ಮಾಡಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಹಿರಿಯರಿಗೆ ತೀರ್ಥ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ