ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 9 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಪಾಲುದಾರಿಕೆ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಸಾಂಸಾರಿಕವಾಗಿ ಮಾತನಾಡುವಾಗ ತಾಳ್ಮೆ ಅಗತ್ಯ. ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡದಿರಿ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ಮಕ್ಕಳ ಭವಿಷ್ಯದ ಬಗ್ಗೆ ನೀವು ಯೋಚಿಸಿದ ರೀತಿಯಲ್ಲೇ ಕೆಲಸಗಳು ಸಾಗುವುದರಿಂದ ಚಿಂತೆ ಬೇಕಾಗಿಲ್ಲ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವ್ಯಾಪಾರಿಗಲಿಗೆ ಹಿತಶತ್ರುಗಳ ಕಾಟ ಕಂಡುಬಂದೀತು.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗುವ ಸಂದರ್ಭಗಳು ಬಂದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರುವುದು.

ಕರ್ಕಟಕ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಮೆಚ್ಚಿನ ವ್ಯಕ್ತಿಗಳೊಂದಿಗೆ ಕಾಲ ಕಳೆಯುವ ಯೋಗ ನಿಮ್ಮದಾಗಲಿದೆ. ನಿಮ್ಮ ಕೆಲಸಗಳಿಗೆ ಗುರುಹಿರಿಯರ ಬೆಂಬಲ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ತಲ್ಲೀನತೆ ಕಂಡುಬರಲಿದೆ. ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಮಕ್ಕಳ ವಿಚಾರದಲ್ಲಿ ಸಂತೋಷ, ನೆಮ್ಮದಿ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಅನ್ಯರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ಸಮಸ್ಯೆ ಮೈಮೇಲೆಳೆದುಕೊಳ್ಳಬೇಡಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಹಿರಿಯರೊಂದಿಗೆ ಭಿನ್ನಾಭಿಪ್ರಾಯವಾಗದಂತೆ ಎಚ್ಚರಿಕೆ ವಹಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವಾಗದಂತೆ ಎಚ್ಚರಿಕೆ ವಹಿಸಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಧನು: ಮಕ್ಕಳ ವಿಚಾರದಲ್ಲಿ ಪ್ರಗತಿ ಕಂಡುಬರುವುದು. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿವೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಮಕರ: ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರ ಹಿಡಿತ ತಪ್ಪದಂತೆ ಎಚ್ಚರಿಕೆ ವಹಿಸಿ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ತೀರ್ಥ ಯಾತ್ರೆ ಕೈಗೊಳ್ಳುವ ಯೋಗ ಕೂಡಿಬರುವುದು. ಸಾಂಸಾರಿಕವಾಗಿ ತಾಳ್ಮೆ ಅಗತ್ಯ.

ಮೀನ: ಸರಕಾರಿ ಉದ್ಯೋಗಿಗಳಿಗೆ ಮುನ್ನಡೆ ಕಂಡುಬರಲಿದೆ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ದಾಂಪತ್ಯ ಸುಖ ವೃದ್ಧಿಯಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವಾಗ ಈ ತಪ್ಪು ಮಾಡಿದರೆ ಫಲ ಸಿಗದು

ಶುಕ್ರವಾರ ಲಕ್ಷ್ಮೀ ನಾರಾಯಣ ಹೃದಯ ಸ್ತೋತ್ರ ಓದುವುದರ ಫಲವೇನು

ರಾಮ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಬುಧವಾರ ತಪ್ಪದೇ ಈ ಸರಸ್ವತಿ ಸ್ತೋತ್ರವನ್ನು ಓದಿ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments