Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 16 ಫೆಬ್ರವರಿ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇವತಾ ಕಾರ್ಯದಲ್ಲಿ ಆಸಕ್ತಿ ಕಂಡುಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಸಾಂಸಾರಿಕವಾಗಿ ನಿಮ್ಮ ಆಪ್ತರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡು ಮುಂದುವರಿಯಬೇಕಾಗುತ್ತದೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ತಾಳ್ಮೆ, ಸಂಯಮ ಅಗತ್ಯ.

ಮಿಥುನ: ವೃತ್ತಿರಂಗದಲ್ಲಿ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯವೊದಗಿಬರಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಯೋಚನೆ ಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ದೂರದ ವ್ಯವಹಾರದಲ್ಲಿ ಅನಿರೀಕ್ಷಿತ ಅಭಿವೃದ್ಧಿ ಕಂಡುಬರಲಿದೆ. ಸ್ವಸಾಮರ್ಥ್ಯದಿಂದ ಗಳಿಕೆ ಮಾಡಿದ ಹಣವನ್ನು ಸರಿಯಾಗಿ ಬಳಸಿಕೊಳ್ಳಿ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗುವ ಸಾಧ್ಯತೆಯಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ನೆರೆಹೊರೆಯವರ ಕಷ್ಟಕ್ಕೆ ನೆರವಾಗಲಿದ್ದೀರಿ.

ಕನ್ಯಾ: ಉದ್ಯೋಗ ವ್ಯವಹಾರದಲ್ಲಿ ವಾಕ್ಚತುರತೆಯಿಂದ ಏಳಿಗೆ ಕಂಡುಬರಲಿದೆ. ಹಿತಶತ್ರುಗಳಿಂದ ದೂರವಿದ್ದರೆ ಉತ್ತಮ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡಲಿದ್ದೀರಿ.

ತುಲಾ: ಆರ್ಥಿಕ ವಿಚಾರದಲ್ಲಿ ಹೂಡಿಕೆ ಮಾಡುವ ಎಚ್ಚರಿಕೆ ಅಗತ್ಯ. ಅಪರಿಚಿತರೊಂದಿಗೆ ವ್ಯವಹಾರ ಬೇಡ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ವಿಶೇಷವಾದ ವ್ಯಕ್ತಿಗಳ ಆಗಮನದಿಂದ ನಿಮ್ಮ ಜೀವನದಲ್ಲಿ ಹೊಸ ಉಲ್ಲಾಸ ಮೂಡಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಧನು: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಾಗಲಿದೆ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಮಕರ: ಸಾಹಸ ಪ್ರವೃತ್ತಿಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ಕೆಲಸಗಳಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಆಸ್ತಿ  ವಿಚಾರಗಳಲ್ಲಿ ಗೊಂದಲಗಳಾದಾಗ ಹಿರಿಯರ ಸಲಹೆ ಪಡೆಯುವುದು ಉತ್ತಮ.

ಕುಂಭ: ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮೇಲಧಿಕಾರಿಗಳಿಂದ ಕಾರ್ಯದೊತ್ತಡ ಹೆಚ್ಚಾಗಬಹುದು. ಮಾತಿನ ಮೇಲೆ ಹಿಡಿತವಿರಲಿ.

ಮೀನ: ಗುರುಹಿರಿಯರಿಂದ ಸೂಕ್ತ ಸಮಯದಲ್ಲಿ ಉತ್ತಮ ಮಾರ್ಗದರ್ಶನ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಅಜಾಗರೂಕತೆಯಿಂದ ನಷ್ಟ ಸಂಭವಿಸಬಹುದು. ಮನೆಯಲ್ಲಿ ಶುಭ ಮಂಗಲಕ್ಕೆ ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ