ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 28 ಫೆಬ್ರವರಿ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಇನ್ನೊಬ್ಬರ ಅತಿಯಾದ ಕಾಳಜಿಯೂ ಕಿರಿ ಕಿರಿ ಉಂಟುಮಾಡಬಹುದು. ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರು ಕೊಡುವ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ಆರೋಗ್ಯದಲ್ಲಿ ಸುಧಾರಣೆ.

ವೃಷಭ: ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ಗುರುಹಿರಿಯರ ಆಶೀರ್ವಾದದೊಂದಿಗೆ ಹೊಸ ಕೆಲಸಗಳಿಗೆ ಕೈಹಾಕಲಿದ್ದೀರಿ. ಇಷ್ಟಮಿತ್ರರೊಂದಿಗೆ ಭೋಜನ ಮಾಡುವ ಯೋಗ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಕಾರ್ಯರಂಗದಲ್ಲಿ ಹಿತಶತ್ರುಗಳಿಂದ ತೊಂದರೆಗಳು ಎದುರಾದೀತು. ಅನಿವಾರ್ಯ ಕಾರಣಗಳಿಗೆ ಅನ್ಯ ಊರಿಗೆ ಸಂಚರಿಸುವ ಸಂದರ್ಭ ಎದುರಾದೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ಚಿಂತೆ ಬೇಡ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಭೂಮಿ, ವಾಹನ ಖರೀದಿ ಯೋಗ ನಿಮ್ಮದಾಗಲಿದೆ. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಸಿಂಹ: ಬಹಳ ದಿನಗಳಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದರೆ ಹೊಂದಾಣಿಕೆ ಕೊರತೆ ಕಾಡೀತು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಉನ್ನತಿ ಕಂಡುಬರಲಿದೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಿದ್ದೀರಿ. ದೂರದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ನಿಮಗೆ ಅತ್ಯಂತ ಪ್ರಿಯವೆನಿಸಿದ್ದ ವಸ್ತುಗಳನ್ನು ಕಳೆದುಕೊಳ್ಳುವ ನೋವು ಎದುರಾದೀತು. ತಾಳ್ಮೆ, ಸಂಯಮ ಅಗತ್ಯ. ಮನಸ್ಸಿಗೆ ಋಣಾತ್ಮಕ ಚಿಂತನೆಗಳು ಬಾರದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಮನಸ್ಸಿಗೆ ಹಿಡಿಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ತಾಳ್ಮೆಯಿರಲಿ.

ಧನು: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ನಿಮ್ಮ ಕೆಲವೊಂದು ನಿರ್ಧಾರಗಳು ಸಂಗಾತಿಯ ಅಸಮಾಧಾನಕ್ಕೆ ಗುರಿಯಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ.

ಮಕರ: ಕೈಗೊಳ್ಳುವ ಕೆಲಸದಲ್ಲಿ ನಿಮ್ಮ ಪರಿಶ್ರಮ ಎದ್ದು ಕಾಣಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸಾಂಸಾರಿಕವಾಗಿ ಸುಂದರ ದಿನಗಳಾಗಿರಲಿವೆ. ಸಂತೋಷ, ನೆಮ್ಮದಿಯಿರಲಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಅನುಕೂಲವಾದ ವಾತಾವರಣವಿರಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಚಿಂತೆ ಬೇಡ.

ಮೀನ: ಮಹಿಳಾ ಉದ್ಯೋಗಿಗಳಿಗೆ ಮುಂಬಡ್ತಿ ಯೋಗ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಮುಂದಿನ ಸುದ್ದಿ
Show comments