ಮೇಷ: ಹಿರಿಯರಿಂದ ಸುಖ ಸಂತೋಷ ಸಿಗಲಿದೆ. ಅನಗತ್ಯ ಯೋಚನೆಗಳಿಂದ ನಿಮ್ಮ ಸಂತೋಷವನ್ನು ನೀವೇ ಹಾಳುಮಾಡಿಕೊಳ್ಳಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಿಂತೆ ಬೇಡ.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಯನ್ನು ಯಾರಿಂದಲೂ ತಪ್ಪಿಸಲಾಗದು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ತಾಳ್ಮೆಯಿರಲಿ.
ಮಿಥುನ: ಬಹುದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲಿದ್ದೀರಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.
ಕರ್ಕಟಕ: ಮನೆಯಲ್ಲಿ ಸಂಪತ್ತು ವೃದ್ಧಿಯಾಗಲಿದ್ದು, ನೆಮ್ಮದಿಗೆ ಕೊರತೆಯಿರದು. ಹಿರಿಯರಿಗೆ ದೇವತಾ ಕಾರ್ಯದಲ್ಲಿ ಭಾಗಿಯಾಗುವ ಯೋಗ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಎಚ್ಚರಿಕೆ ಅಗತ್ಯ.
ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಸಾಮಾಜಿಕವಾಗಿ ಗೌರವ ಸಂಪಾದಿಸಲಿದ್ದೀರಿ. ಆಪ್ತರೊಂದಿಗೆ ಭಿನ್ನಾಬಿಪ್ರಾಯಗಳು ದೂರವಾಗಿ ರಾಜೀ ಸಂಧಾನಕ್ಕೆ ಮುಂದಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಅಧ್ಯಯನದಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.
ತುಲಾ: ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದು, ನಿಮ್ಮ ಮನಸ್ಸಿಗೆ ತೃಪ್ತಿ ಸಿಗುವುದು. ಕೆಲಸ ಕಾರ್ಯಗಳಲ್ಲಿ ಬಂಧು ಮಿತ್ರರ ಸಹಕಾರ ಸಿಗಲಿದೆ. ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಿ. ತಾಳ್ಮೆ ಅಗತ್ಯ.
ವೃಶ್ಚಿಕ: ಸಂಪತ್ತು ವೃದ್ಧಿಗೆ ನಾನಾ ದಾರಿಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅನಿರೀಕ್ಷಿತ ಧನಾಗಮನದಿಂದ ನಿಮ್ಮ ಕೆಲಸಗಳು ಸುಗಮವಾಗಲಿದೆ. ಕೌಟುಂಬಿಕವಾಗಿ ಸಂಬಂಧಗಳಲ್ಲಿ ಬಿರುಕಾಗದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ.
ಧನು: ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ನಿಮ್ಮನ್ನು ಕಷ್ಟಕ್ಕೆ ಸಿಲುಕಿಸಬಹುದು. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.
ಮಕರ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ದಂಪತಿಗಳಲ್ಲಿ ಅನುರಾಗ ವೃದ್ಧಿ, ಸಾಂಸಾರಿಕವಾಗಿ ನೆಮ್ಮದಿ.
ಕುಂಭ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಮಕ್ಕಳನ್ನು ನಿಭಾಯಿಸುವೇ ಹೊಸ ತಲೆನೋವಾಗಲಿದೆ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಹೆಚ್ಚಾಗುವುದು. ಪರರಿಗೆ ಸಹಾಯ ಮಾಡುವ ಮೊದಲು ಯೋಚಿಸಿ ಮುನ್ನಡೆಯಿರಿ.
ಮೀನ: ಮಕ್ಕಳಲ್ಲಿ ವಿಶೇಷ ಪ್ರೀತಿ, ಮಮಕಾರ ಮೂಡಲಿದೆ. ದೂರದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಪ್ರಗತಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.