Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 21 ಮಾರ್ಚ್ 2022 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಎಷ್ಟೇ ಕಷ್ಟಪಟ್ಟರೂ ತಕ್ಕ ಯಶಸ್ಸು ಸಿಗುತ್ತಿಲ್ಲ ಎಂಬ ನಿರಾಸೆ ಕಾಡಲಿದೆ. ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ವಿದ್ಯಾರ್ಥಿಗಳಿಗೆ ಕಷ್ಟಪಟ್ಟರೆ ಮಾತ್ರ ಯಶಸ್ಸು. ತಾಳ್ಮೆ, ಸಂಯಮವಿರಲಿ.

ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ನಿಮ್ಮ ಮುಂದಿನ ಜೀವನಕ್ಕೆ ಇಂದು ನೀವು ಕೈಗೊಳ್ಳುವ ಕೆಲಸಗಳು ಪೂರಕವಾಗಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ.

ಮಿಥುನ: ಅನಗತ್ಯವಾಗಿ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ವಿವಾದ ಮೈಮೇಲೆಳೆದುಕೊಳ್ಳಬೇಡಿ. ಇಷ್ಟ ಭೋಜನ ಮಾಡುವ ಯೋಗ. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ಹಿಂದೆ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ಧೀರಿ. ಯೋಗ್ಯ ವಯಸ್ಕರಿಗೆ ತಕ್ಕ ಸಂಬಂಧಗಳು ಕೂಡಿಬರಲಿದೆ.

ಸಿಂಹ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ಮಾಡಲು ಸಿದ್ಧತೆ ಮಾಡಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಕನ್ಯಾ: ವಿದ್ಯಾರ್ಥಿಗಳ ಸಾಧನೆ ಪೋಷಕರಿಗೆ ಹೆಮ್ಮೆಯುಂಟು ಮಾಡಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಬಹಳ ದಿನಗಳ ನಂತರ ಬಂಧು-ಮಿತ್ರರ ಭೇಟಿಯಾಗಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ತಕ್ಕ ಮನ್ನಣೆ ಸಿಗುವುದು. ಸರ್ಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿದ್ದರೂ ಮನಸ್ಸಿಗೆ ಒಂದು ರೀತಿಯ ತೃಪ್ತಿ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಕಾರ್ಯರಂಗದಲ್ಲಿ ನಿಮಗೆ ಇದುವರೆಗೆ ಅಡ್ಡಿ ಮಾಡುತ್ತಿದ್ದವರಿಂದ ಮುಕ್ತಿ ಸಿಗುವುದು. ಹೊಸ ಯೋಜನೆಗಳನ್ನು ಜಾರಿಗೆ ತರಲು ಇದು ಸಕಾಲ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಅಪರಿಚಿತರೊಂದಿಗೆ ಎಚ್ಚರಿಕೆಯಿರಲಿ.

ಧನು: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ವಿವಾದ ಮೈಮೇಲೆಳೆದುಕೊಳ್ಳಬೇಡಿ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಕಿರು ಸಂಚಾರ ಮಾಡುವಿರಿ.

ಮಕರ: ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ನಿಮ್ಮದಲ್ಲದ ವಸ್ತುವಿನ ಬಗ್ಗೆ ಮೋಹ ಬೆಳೆಸಿಕೊಳ್ಳಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ಎಚ್ಚರಿಕೆಯಿಂದಿರಬೇಕು.

ಕುಂಭ: ಉದ್ಯೋಗದಲ್ಲಿ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟಮಿತ್ರರಿಂದ ಉತ್ತಮ ಸಲಹೆಗಳು ಬರಲಿವೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಿ ಸಂತೋಷ ಕೊಡಲಿದ್ದೀರಿ.

ಮೀನ: ಸಾಮಾಜಿಕವಾಗಿ ಕೀರ್ತಿ ಸಂಪಾದಿಸುವ ಯೋಗ ನಿಮ್ಮದಾಗಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ