ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಕೆಲವೊಂದು ಸಮಸ್ಯೆಗಳನ್ನು ಪರಿಹಾರವಾಗಬೇಕಾದರೆ ನೀವೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.
ವೃಷಭ: ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಬಂಧು ಮಿತ್ರರ ಸಹಕಾರ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.
ಮಿಥುನ: ವಿಶೇಷವಾದ ವ್ಯಕ್ತಿಗಳ ಭೇಟಿ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.
ಕರ್ಕಟಕ: ದೇವತಾ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರಿಗೆ ಕಷ್ಟದ ಸಮಯದಲ್ಲಿ ಸಹಾಯ ಮಾಡಲಿದ್ದೀರಿ. ವ್ಯಾಪಾರಿಗಳಿಗೆ ಉನ್ನತಿಯ ಯೋಗ.
ಸಿಂಹ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆಯಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.
ಕನ್ಯಾ: ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಲ್ಲಿ ಆಸಕ್ತಿ ಕಂಡುಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ತುಲಾ: ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ ಉದರ ಸಂಬಂಧೀ ಸಮಸ್ಯೆಯಾದೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಚಿಂತೆ ಬೇಡ.
ವೃಶ್ಚಿಕ: ಕೆಲಸದ ವಿಚಾರದಲ್ಲಿ ಸಣ್ಣ ಅಸಡ್ಡೆ ಅನಾಹುತಕ್ಕೆ ಕಾರಣವಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.
ಧನು: ಬೇರೆಯವರ ಜೀವನದ ಬಗ್ಗೆ ಅನಗತ್ಯ ಚಿಂತೆ ಬೇಡ. ಹೊಸದಾಗಿ ಬರುವ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆ ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಮಕರ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಜವಾಬ್ಧಾರಿಯುತವಾಗಿ ಕೆಲಸ ಮಾಡುವುದರಿಂದ ಅದಕ್ಕೆ ತಕ್ಕ ಫಲ ಪಡೆಯುವಿರಿ. ಮಕ್ಕಳ ಅಧ್ಯಯನ ನಿಮಿತ್ತ ಪರವೂರಿಗೆ ಸಂಚರಿಸಬೇಕಾಗುತ್ತದೆ.
ಕುಂಭ: ಮಹಿಳೆಯರಿಗೆ ಉನ್ನತಾಧಿಕಾರಿಗಳ ಪ್ರಶಶಂಸೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.
ಮೀನ: ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ವಾಹನ ಖರೀದಿಗೆ ಯೋಗ ಸದ್ಯದಲ್ಲೇ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಜನೆಗಳು ಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.