ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 31 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದಾಂಪತ್ಯದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ. ಮಾತಿನ ಮೇಲೆ ನಿಗಾ ಇರಲಿ. ಉದ್ಯೋಗ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ಯಾವುದೇ ವಿಚಾರದಲ್ಲಿ ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಗೊಂದಲಗಳಿಗೆ ಅವಕಾಶ ಕೊಡಬೇಡಿ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ನಯವಂಚಕರ ಮಾತಿಗೆ ಮರುಳಾಗಬೇಡಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ಕರ್ಕಟಕ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣವಿರಲಿ.

ಸಿಂಹ: ಕಾರ್ಯರಂಗದಲ್ಲಿ ನಿಮ್ಮ ಬೆಳವಣಿಗೆ ಇತರರೂ ಅಸೂಯೆಪಡುವಂತಿರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿಮ್ಮ ವಾಕ್ಚತುರತೆಯಿಂದ ವೃತ್ತಿರಂಗದಲ್ಲಿ ಮುನ್ನಡೆ ಕಂಡುಬರಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಸಹೋದರ ಸಮಾನರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ತಲ್ಲೀನರಾಗಲಿದ್ದಾರೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಅಗತ್ಯ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದ್ದು, ಪ್ರೀತಿ ಪಾತ್ರರೊಂದಿಗೆ ಸಂತೋಷವಾಗಿ ಕಾಲ ಕಳೆಯಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ.

ಧನು: ಹಿರಿಯರೊಂದಿಗೆ ಅನಗತ್ಯ ಸಂಘರ್ಷಕ್ಕೆ ಎಡೆಮಾಡಿಕೊಡಬೇಡಿ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಮಾಡುವ ಯೋಗ. ಹಣಕಾಸಿನ ವಿಚಾರದಲ್ಲಿ ಸಮಸ್ಯೆಯಾಗದು. ಆದರೆ ಹಿತಶತ್ರುಗಳ ಕಾಟ ಕಂಡುಬಂದೀತು.

ಮಕರ: ದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ಉದಾರ ಬುದ್ಧಿಯಿಂದ ಸಮಸ್ಯೆಯಾಗದಂತೆ ಎಚ್ಚರಿಕೆ  ವಹಿಸಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಹೊಸದಾಗಿ ಆರಂಭಿಸಿದ್ದ ಕಾಮಗಾರಿಗಳಲ್ಲಿ ಪ್ರಗತಿ ಕಂಡುಬರುವುದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಮೀನ: ವಿಶೇಷ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಉದ್ದೇಶಿತ ಕಾರ್ಯಗಳು ನೆರವೇರಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಹಾತೊರೆಯಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments