Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 5 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬರಲಿದೆ. ವಿವೇಚನೆಯಿಂದ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಒಟ್ಟಿಗೆ ಕುಳಿತು ಭೋಜನ ಮಾಡುವ ಅವಕಾಶ.

ವೃಷಭ: ಗುರುಹಿರಿಯರ ಸಲಹೆಗಳಿಂದ ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರತೀ ಹೆಜ್ಜೆಯಿಡುವ ಮೊದಲು ಪರಾಮರ್ಶಿಸಿ ಮುನ್ನಡೆಯಿರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರ ಪ್ರಶಂಸೆ ಗಳಿಸುವ ಅವಕಾಶ. ಅನಗತ್ಯ ಚಿಂತೆ ಬೇಡ.

ಮಿಥುನ: ನಿಮ್ಮ ಸಾಹಸ ಪ್ರವೃತ್ತಿಯಿಂದಾಗಿ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಇತರರು ಅಸೂಯೆಪಡುವ ಸಂದರ್ಭ ಎದುರಾಗಲಿದೆ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಸಿಂಹ: ಮನೆ ಕೆಲಸದ ನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ದೇಹಾರೋಗ್ಯದ ವಿಚಾರದಲ್ಲಿ ಉದಾಸೀನತೆ ಸಲ್ಲದು. ಆರ್ಥಿಕ ವಿಚಾರದಲ್ಲಿ ಉನ್ನತಿಯ ಯೋಗವಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಇತರರ ಅಸಮಾಧಾನಕ್ಕೆ ಗುರಿಯಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ಆರ್ಥಿಕ ವಿಚಾರದಲ್ಲಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಒಳಿತು. ದಾಂಪತ್ಯದಲ್ಲಿ ಮಧ್ಯಮ ಸುಖ. ತಾಳ್ಮೆಯಿರಲಿ.

ವೃಶ್ಚಿಕ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು:  ದೂರದ ವ್ಯವಹಾರಗಳಿಂದ ವರಮಾನ ಹೆಚ್ಚಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ದಿನದಂತ್ಯಕ್ಕೆ ನೆಮ್ಮದಿ.

ಮಕರ: ಮಾನಸಿಕವಾಗಿ ಕೆಲವೊಂದು ಹಳೆಯ  ವಿಚಾರಗಳು ಕಾಡಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ.

ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ಕಂಡುಬರಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಸಂತೋಷವಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ