ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 8 ಜುಲೈ 2022 (08:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಕೆಲವೊಂದು ನಡತೆಗಳು ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿವೆ. ಇಷ್ಟಮಿತ್ರರೊಂದಿಗೆ ಪ್ರವಾಸ ಕೈಗೊಳ್ಳುವ ಯೋಗವಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ.

ವೃಷಭ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ಮೋಹ ಬೇಡ. ನಿರ್ಧಾರ ಕೈಗೊಳ್ಳುವಾಗ ಸಂದಿಗ್ಧತೆ ಕಾಡಲಿದೆ. ಪರರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಮಿಥುನ: ಹಿಂದೆ ನಡೆದ ವಿಚಾರಗಳನ್ನು ಮೆಲುಕು ಹಾಕಿಕೊಳ್ಳಲಿದ್ದೀರಿ. ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಇತರರ ಮೆಚ್ಚುಗೆ ಗಳಿಸಲಿದ್ದೀರಿ. ವ್ಯಾವಹಾರಿಕವಾಗಿ ನಿಮ್ಮ ಯೋಜನೆಗಳಿಗೆ ಲಾಭ ಕಂಡುಕೊಳ್ಳಲಿದ್ದೀರಿ.

ಕರ್ಕಟಕ: ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲು ಅವಕಾಶ ಸಿಗಲಿದೆ. ದೂರ ಪ್ರಯಾಣಕ್ಕಾಗಿ ಧನವ್ಯಯವಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಹಿತಶತ್ರುಗಳ ಕಾಟ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನೀವು ಇಂದು ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಭವಿಷ್ಯಕ್ಕೆ ಸಹಾಯವಾಗಲಿದೆ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸುವುದು ಉತ್ತಮ. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಕನ್ಯಾ: ದೂರ ಪ್ರಯಾಣಕ್ಕೆ ಸಿದ್ಧತೆ ಮಾಡಬೇಕಾಗುತ್ತದೆ. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಲು ಮುಂದಾಗಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ತುಲಾ: ಶಾರೀರಿಕವಾಗಿ ಸುಖ, ಶಾಂತಿಯಿರಲಿದೆ. ನಿಮ್ಮ ಮನೆ ವಿಚಾರದಲ್ಲಿ ನೆರೆಹೊರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸುವಿರಿ.

ವೃಶ್ಚಿಕ: ವ್ಯವಹಾರ ನಿಮಿತ್ತ ಅನ್ಯ ಊರಿಗೆ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ. ಅನಿರೀಕ್ಷಿತ ಆದಾಯ ಗಳಿಕೆಯಾಗಲಿದೆ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು:  ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ಪರ ಊರಿಗೆ ಸಂಚರಿಸುವ ಅವಕಾಶ ಸಿಗಲಿದೆ. ಚಿತ್ತ ಚಾಂಚಲ್ಯದಿಂದಾಗಿ ನಿರ್ಧಾರ ತೆಗೆದುಕೊಳ್ಳಲು ಗೊಂದಲವಾದೀತು. ಸಂಗಾತಿಯ ಸಲಹೆ ಪಡೆಯುವುದು ಉಚಿತ.

ಮಕರ: ಅತಿಯಾದ ಆತ್ಮವಿಶ್ವಾಸದಿಂದಲೇ ವಂಚನೆಗೊಳಗಾಗುವ ಅಪಾಯವಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಹಿಂದೆ ಮಾಡಿದ್ದ ಉಳಿತಾಯ ಯೋಜನೆಗಳು ಉಪಯೋಗಕ್ಕೆ ಬರಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ ನೆಮ್ಮದಿ ನಿಮ್ಮದಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಹೊಸ ಯೋಜನೆಗಳಿಗೆ ಕೈ ಹಾಕುವ ಮುನ್ನ ಸಾಕಷ್ಟು ಪರಾಮರ್ಶೆ ನಡೆಸುವುದು ಉತ್ತಮ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಕ್ಕೀತು. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments