Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 9 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ ಎನ್ನುವ ತೀರ್ಮಾನಕ್ಕೆ ಬರಲಿದ್ದೀರಿ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ ಶೀಘ್ರವೇ ನನಸಾಗಲಿದೆ. ಬಾಕಿ ಉಳಿಸಿಕೊಂಡಿದ್ದ ಹಣ ಪಾವತಿ ಲೆಕ್ಕ ಚುಕ್ತಾ ಮಾಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ನೆಮ್ಮದಿ ಸಿಗಲಿದೆ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರದೇ ನಿರಾಸೆಯಾದೀತು.

ಕರ್ಕಟಕ: ನಿಮ್ಮ ಹಿತಶತ್ರುಗಳ ನಯವಾದ ಮಾತಿಗೆ ಮರುಳಾಗದಿರಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ  ವಹಿಸಬೇಕಾಗುತ್ತದೆ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ತೀವ್ರ ಪೈಪೋಟಿ ಎದುರಾದೀತು. ಆರ್ಥಿಕವಾಗಿ ಲಾಭ-ನಷ್ಟಗಳ ಲೆಕ್ಕಾಚಾರ ಹಾಕಿ ಮುನ್ನಡೆಯಬೇಕಾಗುತ್ತದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಸಂಭವ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಕನ್ಯಾ: ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಿದ ನೆಮ್ಮದಿ ನಿಮ್ಮದಾಗುವುದು. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ ಕೂಡಿಬರಲಿದೆ. ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ನಿಮ್ಮ ಒಳಗುಟ್ಟುಗಳನ್ನು ಬಹಿರಂಗಪಡಿಸುವ ಕಾಲ ಇದಾಗಲಿದೆ. ಮಕ್ಕಳಿಗೆ ವಿಶೇಷ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ವೃಶ್ಚಿಕ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆಯಿಂದ ಕಾರ್ಯಸಾಧನೆಗೆ ಹಿಂದೇಟು ಹಾಕಲಿದ್ದೀರಿ. ನಿಮ್ಮ ಮನಸ್ಸಿನ ಭಾವನೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳವುದು ಸೂಕ್ತ.

ಧನು:  ಅನಗತ್ಯ ಮಾತು, ಕೃತಿಗಳಿಂದ ಕುಟುಂಬದಿಂದ ಭಿನ್ನಾಭಿಪ್ರಾಯಗಳಾದೀತು. ಸಂಗಾತಿಯ ಸಲಹೆಗಳನ್ನು ಸ್ವೀಕರಿಸುವುದು ಉತ್ತಮ. ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಕರ: ಹೊಸದಾಗಿ ಉದ್ಯೋಗ, ಉದ್ದಿಮೆ ಆರಂಭಿಸಿದ್ದರೆ ಯಶಸ್ಸು ಕಂಡುಬರಲಿದೆ. ಆರ್ಥಿಕವಾಗಿ ಕಷ್ಟದ ದಿನಗಳು ದೂರವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮೀನ: ನಿಮ್ಮ ವ್ಯವಹಾರದಲ್ಲಿ ಪ್ರಗತಿ ಕಂಡು ನೆಮ್ಮದಿಯಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ