ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 11 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರುವುದು. ಮಾನಸಿಕವಾಗಿ ಕೆಲವೊಂದು ವಿಚಾರಗಳು ನಿಮ್ಮನ್ನು ಚಿಂತೆಗೀಡುಮಾಡಲಿವೆ. ಮಕ್ಕಳ ಸುಖ ಸಂತೋಷಕ್ಕಾಗಿ ಪರಿಶ್ರಮ ಪಡಬೇಕಾದೀತು. ತಾಳ್ಮೆಯಿರಲಿ.

ವೃಷಭ: ಬಂಧು ಬಳಗದವರಿಂದ ಪರಸ್ಪರ ಸಹಕಾರ ಕಂಡುಬರಲಿದ್ದು, ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಹಿರಿಯರ ಅಭಿಪ್ರಾಯಕ್ಕೆ ಬೆಲೆ ಕೊಡುವುದು ಉತ್ತಮ. ಆರ್ಥಿಕವಾಗಿ ನಿರೀಕ್ಷಿತ ಲಾಭವಾಗಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇವರ ಪ್ರಾರ್ಥನೆ ಮಾಡುವುದು ಉತ್ತಮ.

ಕರ್ಕಟಕ: ಸಹೋದರ ಸಮಾನರಿಗೆ ಕಷ್ಟದಲ್ಲಿ ಸಹಾಯ ಮಾಡಲಿದ್ದೀರಿ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.

ಸಿಂಹ: ಉನ್ನತ ಸ್ಥಾನಮಾನಕ್ಕಾಗಿ ನೀವು ಪಡುತ್ತಿರುವ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಹೊಸ ಮಿತ್ರರನ್ನು ಸಂಪಾದಿಸಲಿದ್ದು, ಮಾನಸಿಕವಾಗಿ ಸುಖ, ಸಂತೋಷವಿರಲಿದೆ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಕ್ಕಳಿಂದ ಸಂತೋಷ ಸಿಗಲಿದೆ. ಅನಿರೀಕ್ಷಿತ ಧನಾಗಮನವಾಗುವುದು.

ತುಲಾ: ಸಂದರ್ಭಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯಗಳಿಂದ ಪಾರಾಗಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ.

ವೃಶ್ಚಿಕ: ಪಾಲುದಾರಿಕೆ ವ್ಯವಹಾರಹದಲ್ಲಿ ಅಭಿವೃದ್ಧಿಗೆ ಹೊಸ ದಾರಿಗಳು ಕಂಡುಬರಲಿವೆ. ಗುರುಹಿರಿಯರಿಂದ ನಿಮ್ಮ ಕೆಲಸಗಳಿಗೆ ಪ್ರೋತ್ಸಾಹ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಿಂತೆ ಬೇಡ.

ಧನು: ಸಾಂಸಾರಿಕವಾಗಿ ನೀವು ಕೈಗೊಳ್ಳುವ ಕೆಲವೊಂದು ನಿರ್ಧಾರಗಳು ಇತರರ ಅಸಮಾಧಾನಕ್ಕೆ ಗುರಿಯಾದೀತು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ.

ಮಕರ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದ ಸಫಲತೆ ಕಂಡುಬರಲಿದೆ. ನೂತನ ಮಿತ್ರರ ಸಮಾಗಮವಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ  ವಹಿಸಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಕುಂಭ: ಸಂದರ್ಭೋಚಿತವಾಗಿ ನಿರ್ಧಾರ ತೆಗೆದುಕೊಳ್ಳುವುದರಿಂದ ಕಾರ್ಯರಂಗದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ದಾಂಪತ್ಯದಲ್ಲಿ ಮಧ್ಯಮ ಸುಖ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು.

ಮೀನ: ಪತಿ-ಪತ್ನಿಯರ ನಡುವೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಾಗಲಿವೆ. ಮಕ್ಕಳಿಂದ ಸಂತೋಷ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಲಕ್ಷ್ಮೀ ನಾರಾಯಣ ಹೃದಯ ಸ್ತೋತ್ರ ಓದುವುದರ ಫಲವೇನು

ರಾಮ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಬುಧವಾರ ತಪ್ಪದೇ ಈ ಸರಸ್ವತಿ ಸ್ತೋತ್ರವನ್ನು ಓದಿ

ಈ ಎಲ್ಲಾ ಸಮಸ್ಯೆಯಿರುವವರು ಸೌಂದರ್ಯ ಲಹರಿ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments