ಮೇಷ: ಅನಿರೀಕ್ಷಿತ ಧನಾದಾಯ ಆಗಮನವಾಗಲಿದ್ದು, ಹೊಸ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಹೊಸ ಸಂಬಂಧಗಳು ನಿಮ್ಮ ಮನಸ್ಸಿಗೆ ಸಂತೋಷ ಕೊಡಲಿದೆ. ಇಷ್ಟಮಿತ್ರರೊಂದಿಗೆ ಕೆಲವು ಕಾಲ ಕಳೆಯಲಿದ್ದೀರಿ.
ವೃಷಭ: ನಿಮ್ಮ ಜವಾಬ್ಧಾರಿಯುತ ನಿರ್ಧಾರಗಳಿಂದ ಸಂಭಾವ್ಯ ಸಮಸ್ಯೆಗಳು ತಪ್ಪಿಹೋಗಲಿವೆ. ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಿಥುನ: ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ ಕಂಡುಬರಲಿದೆ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ.
ಕರ್ಕಟಕ: ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಬಂಧುಮಿತ್ರರ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ಆಸ್ತಿ ವಿಚಾರದಲ್ಲಿ ನಿಮ್ಮ ಪರಿಶ್ರಮದಿಂದ ಸಮಸ್ಯೆಗಳು ಪಾರಾಗಲಿವೆ. ಅನಗತ್ಯ ಚಿಂತೆ ಬೇಡ.
ಸಿಂಹ: ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಅಧಿಕಾರಿ ವರ್ಗದವರಿಂದ ನಿಮ್ಮ ಕೆಲಸಗಳಿಗೆ ಮೆಚ್ಚುಗೆ ಸಿಗಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ.
ಕನ್ಯಾ: ಉದ್ಯೋಗ, ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ಧೀರಿ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಮುನ್ನಡೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.
ತುಲಾ: ಬಹಳ ದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲು ಮುಂದಾಗಲಿದ್ದೀರಿ. ಹಿರಿಯರಿಗೆ ತೀರ್ಥ ಕ್ಷೇತ್ರ ಸಂದರ್ಶನ ಯೋಗ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ ಕಂಡುಬರಲಿದೆ.
ವೃಶ್ಚಿಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬರಲಿದೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ.
ಧನು: ನಿಮ್ಮ ಭವಿಷ್ಯದ ಕೆಲಸಗಳಿಗೆ ಇಂದೇ ಅಡಿಗಲ್ಲು ಹಾಕಲಿದ್ದೀರಿ. ಉದ್ಯೋಗಸ್ಥರಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕೌಟುಂಬಿಕವಾಗಿ ಸಹಕಾರ ಕಂಡುಬರಲಿದೆ.
ಮಕರ: ನಿಮ್ಮ ಉದಾರ ಮನೋಭಾವವನ್ನು ದುರುಪಯೋಗಪಡಿಸಿಕೊಳ್ಳುವವರಿರುತ್ತಾರೆ. ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿರಲಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಚಿಂತೆ ಬೇಡ.
ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಕೂಡಿಬರಲಿದೆ. ಧಾರ್ಮಿಕ ಕೆಲಸಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ತಾಳ್ಮೆಯಿರಲಿ.
ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿರಿ. ಸಂಗಾತಿಯ ಸಹಕಾರ ಸಿಗಲಿದೆ.