Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 2 ಆಗಸ್ಟ್ 2022 (07:23 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಹಿಳೆಯರಿಗೆ ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಹಳೆಯ ವಿಚಾರಗಳನ್ನು ತಲೆಯಲ್ಲಿಟ್ಟುಕೊಂಡು ಖಿನ್ನರಾಗಬೇಡಿ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಿ.

ವೃಷಭ: ಸಂಗಾತಿಯೊಂದಿಗೆ ಹಿಂದೆ ಆಗಿದ್ದ ಘರ್ಷಣೆಗಳನ್ನು ಮರೆತು ಹೊಸ ಜೀವನ ನಡೆಸಲು ಮುಂದಾಗಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ತಾಳ್ಮೆಯಿರಲಿ.

ಮಿಥುನ: ಪ್ರೀತಿ ಪಾತ್ರರೊಂದಿಗೆ ಮನಸ್ಸಿನ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಹಪಾಠಿಗಳಿಂದ ತೊಂದರೆಗಳು ಎದುರಾದೀತು. ಕಾರ್ಯರಂಗದಲ್ಲಿ ಬಿಡುವಿಲ್ಲದ ಕೆಲಸವಿರಲಿದೆ.

ಕರ್ಕಟಕ: ಯೋಜನಾ ಬದ್ಧವಾಗಿ ಕೆಲಸ ಮಾಡುವುದರಿಂದ ಭವಿಷ್ಯದಲ್ಲಿ ತೊಂದರೆಗಳು ಎದುರಾಗದು. ಸಹೋದರಾದಿ ಸಂಬಂಧಿಗಳ ಕಷ್ಟಕ್ಕೆ ಪರಿಹಾರ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಕೋರ್ಟು ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗುವ ಸಾಧ‍್ಯತೆ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಕನ್ಯಾ: ಕೌಟುಂಬಿಕ ವಿಚಾರದಲ್ಲಿ ಮೂರನೆಯವರ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಡಿ. ಕೈಲಾದ ಸಹಾಯ ಮಾಡಿ ಮನಸ್ಸಿಗೆ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಉನ್ನತಿಯ ಯೋಗ.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದ್ದು, ನಿರಾಸೆ ಬೇಡ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.

ವೃಶ್ಚಿಕ: ವ್ಯಾಪಾರ, ವ್ಯವಹಾರಸ್ಥರಿಗೆ ನಾನಾ ರೀತಿಯ ಅವಕಾಶಗಳು ಒದಗಿಬರಲಿವೆ.  ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಧನು: ವಸ್ತು ಸ್ಥಿತಿಗೆ ತಕ್ಕಂತೆ ನಡೆದುಕೊಳ್ಳುವುದು ಮುಖ್ಯ. ಸಂಗಾತಿಯ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಮಕರ: ನಿಮ್ಮ ಮೂಗಿನ ನೇರಕ್ಕೆ ಯೋಚಿಸುವುದರಿಂದ ಇತರರ ನಿಷ್ಠುರಕ್ಕೊಳಗಾಗಬೇಕಾದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಕಾರ್ಯರಂಗದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಹೆಚ್ಚಾದೀತು.

ಕುಂಭ: ಮಧ‍್ಯಮ ವರ್ಗದ ಜನರಿಗೆ ಆರ್ಥಿಕವಾಗಿ ಧನಗಳಿಕೆಗೆ ಅವಕಾಶಗಳು ಸಿಗಲಿವೆ. ಇತರರು ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ಧೀರಿ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ವಿಶೇಷವಾದ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮಹಿಳೆಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವ. ಎಚ್ಚರಿಕೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ