Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 7 ಸೆಪ್ಟಂಬರ್ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳು ಕಿರಿ ಕಿರಿ ತಂದೀತು. ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಸಮಸ್ಯೆಗಳಾಗದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದಿನದಂತ್ಯಕ್ಕೆ ನೆಮ್ಮದಿ.

ವೃಷಭ:ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಲಾಭದಾಯಕ ಕೆಲಸ ಮಾಡಲು ಯೋಜನೆ ರೂಪಿಸಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಅತಿಯಾಗಿ ಇನ್ನೊಬ್ಬ ಮೇಲೆ ಅವಲಂಬನೆಯೂ ಒಳ್ಳೆಯದಲ್ಲ. ವೈವಾಹಿಕ ಸಂಬಂಧಗಳಲ್ಲಿ ಬಿರುಕು ಮೂಡದಂತೆ ಎಚ್ಚರಿಕೆ ವಹಿಸಿ. ಸ್ನೇಹಿತರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಡುವ ಯೋಗ.

ಕರ್ಕಟಕ: ನಿಮ್ಮ ಇಷ್ಟಾನುಸಾರ ನಿರ್ಧಾರ ಕೈಗೊಂಡು ಕುಟುಂಬಸ್ಥರ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರೀ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗ.

ಸಿಂಹ: ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಇದ್ದರೂ ಅಂತಿಮ ಜಯ ನಿಮ್ಮದಾಗುವುದು. ಇಷ್ಟಮಿತ್ರರೊಂದಿಗೆ ಸುಮಧುರ ಕ್ಷಣ ಕಳೆಯುವ ಯೋಗ. ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿ ವಹಿಸಿಕೊಳ್ಳಬೇಕಾಗುತ್ತದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿ ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ಮಧುರ ಕ್ಷಣ ಕಳೆಯುವ ಯೋಗ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆಯಿರಲಿ.

ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಾಧನೆ ಮಾಡಿದ ಸಂತೋಷ ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ತಂತ್ರಗಾರಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮಾನಸಿಕವಾಗಿ ಸದೃಢತೆಯಿರಲಿದ್ದು, ಉತ್ಸಾಹದಲ್ಲಿ ಹೊಸ ಕೆಲಸಗಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ನಾನಾ ರೀತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಧನು: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗ ಸದ್ಯದಲ್ಲೇ ಕೂಡಿಬರುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಭೂಮಿ, ವಾಹನ ಖರೀದಿಗೆ ಮುಂದಾಗಲಿದ್ದೀರಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ.

ಮಕರ: ನಿಮ್ಮ ಮಾತಿನಿಂದಲೇ ಇಂದು ಇತರರ ಸೆಳೆಯಲಿದ್ದೀರಿ. ವಿಶೇಷವಾದ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ತಿರುವು ಸಿಗಲಿದೆ. ಕಾರ್ಯರಂಗದಲ್ಲಿ ಅಧಿಕ ಕಾರ್ಯದೊತ್ತಡ ಕಂಡುಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳ ಆದೇಶ ಪಾಲಿಸಲೇಬೇಕಾದ ಒತ್ತಡ. ಸಾಲಗಾರರ ಕಾಟದಿಂದ ಮುಕ್ತಿ ಸಿಕ್ಕೀತು. ಹೊಸದಾಗಿ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವ ಉತ್ಸಾಹ ಕಂಡುಬರಲಿದೆ. ತಾಳ್ಮೆಯಿರಲಿ.

ಮೀನ: ಆತುರಕ್ಕೆ ಬಿದ್ದು ತೀರ್ಮಾನ ತೆಗೆದುಕೊಳ‍್ಳಲು ಹೋಗಬೇಡಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments