ಮೇಷ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.
ವೃಷಭ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಕಂಡುಕೊಳ್ಳಲು ದಾರಿ ಸಿಗಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.
ಮಿಥುನ: ಸಂಬಂಧ ಸುಧಾರಣೆಗೆ ಅವಕಾಶ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಬಂಧು ಮಿತ್ರರ ಪ್ರೋತ್ಸಾಹದಿಂದ ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಉತ್ಸಾಹ ಕಂಡುಬರಲಿದೆ. ತಾಳ್ಮೆಯಿರಲಿ.
ಕರ್ಕಟಕ: ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಏಳಿಗೆ. ಯಂತ್ರೋಪಕರಣಗಳೊಂದಿಗೆಕ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.
ಸಿಂಹ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ದಾಯಾದಿಗಳೊಂದಿಗೆ ಸಂಬಂಧ ಸುಧಾರಣೆಗೆ ಮುಂದಾಗಲಿದ್ದೀರಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ದಿನದಂತ್ಯಕ್ಕೆ ನೆಮ್ಮದಿ.
ಕನ್ಯಾ: ಕಾರ್ಮಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ತಾಳ್ಮೆಯಿರಲಿ.
ತುಲಾ: ನಿಮ್ಮಲ್ಲಿರುವ ನಾಯಕತ್ವದ ಗುಣ ಸಹಾಯಕ್ಕೆ ಬರಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ.
ವೃಶ್ಚಿಕ: ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಸರಕಾರಿ ನೌಕರರಿಗೆ ಬಿಡುವಿಲ್ಲದ ದುಡಿತ. ವೈದ್ಯ ವೃತ್ತಿಯವರಿಗೆ ಕೀರ್ತಿ ಸಂಪಾದಿಸುವ ಯೋಗ. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಹಿನ್ನಡೆಯಾದೀತು.
ಧನು: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರಲಿದೆ. ಮಹಿಳೆಯರಿಗೆ ವಿಶ್ರಾಂತಿಯ ಯೋಗ.
ಮಕರ: ಅನಗತ್ಯ ಮಾತುಗಳಿಂದ ದೂರವಿರುವುದು ಉತ್ತಮ. ಕೌಟುಂಬಿಕವಾಗಿ ಹೊಸ ನಿರ್ಧಾರ ಕೈಗೊಳ್ಳುವ ಮುನ್ನ ಕುಟುಂಬದವರ ಜೊತೆ ಚರ್ಚಿಸಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಕಿರು ಓಡಾಟ ನಡೆಸಲಿದ್ದೀರಿ.
ಕುಂಭ: ಮಾತಿನಲ್ಲಿ ಇತರರನ್ನು ಮೋಡಿ ಮಾಡಲಿದ್ದೀರಿ. ನಯ ವಂಚಕರಿಂದ ದೂರವಿರುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ಹೊಸ ಜವಾಬ್ಧಾರಿ ನೀಡಲಿದ್ದೀರಿ. ಅನಿರೀಕ್ಷಿತ ಧನಾಗಮನವಾಗಲಿದೆ.
ಮೀನ: ಕೌಟುಂಬಿಕವಾಗಿ ಪರಸ್ಪರ ಬೆಂಬಲ ನೀಡುವುದರಿಂದ ಅಭಿವೃದ್ಧಿ ಕಾಣಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳಿಬರುವುದು.