Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 14 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಲೇವಾದೇವಿ ವ್ಯವಹಾರ ಮಾಡುವವರಿಗೆ ನಷ್ಟದ ಭೀತಿ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸುವಿರಿ. ಸಂಗಾತಿಗೆ ನಿಮ್ಮ ಮನಸ್ಸಿನ ಮಾತನ್ನು ಹೇಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ವೃಷಭ: ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಸಹೋದರಾದಿ ಸಂಬಂಧಿಗಳೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ತಾಳ್ಮೆಯಿರಲಿ.

ಮಿಥುನ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದ್ದು, ನೆಮ್ಮದಿ ಕಾಣಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಬರಬೇಕಾದ ಸಾಲ ಮರುಪಾವತಿಯಾಗಲಿದೆ. ಚಿಂತೆ ಬೇಡ.

ಕರ್ಕಟಕ: ಕಾರ್ಯರಂಗದಲ್ಲಿ ಎಷ್ಟೇ ಕಾರ್ಯದೊತ್ತಡವಿದ್ದರೂ ತಾಳ್ಮೆ ಕಳೆದುಕೊಳ್ಳಬೇಡಿ. ಕೌಟುಂಬಿಕವಾಗಿ ಇತರರ ಸಹಕಾರ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ವ್ಯಾವಹಾರಿಕವಾಗಿ ಲಾಭ ಕಂಡುಬರಲಿದೆ. ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಕಿವಿ ಹಿಂಡಿಸಿಕೊಳ್ಳುವ ಪರಿಸ್ಥಿತಿ ಎದುರಾದೀತು.

ಕನ್ಯಾ: ಭೂಮ್ಯಾದಿ ವ್ಯವಹಾರಗಳಲ್ಲಿ ಜಯ ಸಿಗುವುದು. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಉದ್ದಿಮೆದಾರರಿಗೆ ಆರ್ಥಿಕವಾಗಿ ಲಾಭವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಅಸಡ್ಡೆ ಬೇಡ.

ತುಲಾ: ನಿಮಗೆ ಅನುಕೂಲಕರವಾದ ವಾತಾವರಣವಿರುವುದರಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ಹಣಕಾಸಿನ ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ಜಗತ್ತೇ ನಿಮ್ಮ ವಿರುದ್ಧ ಎನಿಸಿದರೂ ಕುಟುಂಬ ಸದಸ್ಯರ ಬೆಂಬಲ ನಿಮಗಿರಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.

ಧನು: ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮ ಸುಖ-ದುಃಖಗಳಲ್ಲಿ ಆಪ್ತರು ಭಾಗಿಯಾಗಲಿದ್ದಾರೆ. ಕ್ರಿಯಾತ್ಮಕ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದೀರಿ. ಕೆಟ್ಟವರ ಸ್ನೇಹ ಸಂಗದಿಂದ ದೂರವಿರುವುದು ಉತ್ತಮ.

ಮಕರ: ಕಾರ್ಯರಂಗದಲ್ಲಿ ನಿಮ್ಮ ಶತ್ರುಗಳಿಗೆ ಸೋಲಾಗಲಿದೆ. ಅಂದುಕೊಂಡ ಸಮಯಕ್ಕೆ ಕೆಲಸ ಪೂರ್ತಿ ಮಾಡಿದ ತೃಪ್ತಿ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಸಹಜ. ತಾಳ್ಮೆ, ಸಂಯಮವಿರಲಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಅವಕಾಶ ಸಿಗುವುದು. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಪ್ರಾಪ್ತಿಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಇನ್ನೊಬ್ಬರಿಗೆ ಒಂದು ವಿಚಾರ ಹೇಳುವಾಗ ನೂರು ಬಾರಿ ಯೋಚಿಸಬೇಕಾದ ಪರಿಸ್ಥಿತಿ ನಿಮ್ಮದಾದೀತು. ದೂರದ ವ್ಯವಹಾರಗಳಿಂದ ನಿಮ್ಮ ವರಮಾನ ಹೆಚ್ಚಳವಾಗಲಿದೆ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ