ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಕಾರ್ಯಸಾಧನೆಗೆ ಅನೇಕ ಅಡ್ಡಿಗಳು ಕಂಡುಬಂದೀತು. ಆದರೆ ನಿಮ್ಮ ಆತ್ಮವಿಶ್ವಾಸವೇ ನಿಮ್ಮನ್ನು ಕಾಪಾಡಲಿದೆ. ಗೃಹಿಣಿಯರಿಗೆ ಕೊಂಚ ಬಿಡುವಿನ ಸಮಯ ಸಿಗಲಿದೆ. ಹಣ ಗಳಿಕೆಗೆ ನಾನಾ ದಾರಿಗಳು ಕಂಡುಬರಲಿದೆ.
ವೃಷಭ: ಅನಗತ್ಯ ಚರ್ಚೆಗೆ ಅವಕಾಶ ಮಾಡಿಕೊಡದಿರಿ. ಗುರುಹಿರಿಯರ ಬೆಂಬಲ ನಿಮ್ಮ ಪರವಾಗಿರಲಿದೆ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.
ಕರ್ಕಟಕ: ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಅಂದುಕೊಂಡ ಕೆಲಸ ಪೂರ್ತಿ ಮಾಡಲು ಮಿತ್ರರ ಸಹಾಯ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳಿಬರಲಿದೆ.
ಸಿಂಹ: ದೂರದ ಮಿತ್ರರಿಂದ ನಿಮಗೆ ಅನುಕೂಲವಾಗಲಿದೆ. ಬಂಧು ಮಿತ್ರರನ್ನು ಬಹಳ ದಿನಗಳ ನಂತರ ಭೇಟಿಯಾಗುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಕನ್ಯಾ: ಜಲೋತ್ಪನ್ನಗಳ ಉದ್ಯಮದಲ್ಲಿ ತೊಡಗಿಸಿಕೊಂಡವರಿಗೆ ಧನ ಲಾಭವಾಗಲಿದೆ. ಕೈಯಲ್ಲಿರುವ ಕೆಲಸ ನಷ್ಟವಾಗದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಇನ್ನೊಬ್ಬರಿಗೆ ಸಹಾಯ ಮಾಡುವ ಮೂಲಕ ನಿಮ್ಮ ಮೇಲಿನ ಅಪವಾದ ಕಳೆದುಕೊಳ್ಳಲಿದ್ದೀರಿ.
ತುಲಾ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ತರಲು ಇದು ಸಕಾಲ. ಪಾಲುದಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿಯ ದಿನವಾಗಿರಲಿದೆ. ವಿದ್ಯಾರ್ಥಿಗಳಿಗೆ ಪ್ರಶಂಸೆ ಸಿಗಲಿದೆ.
ವೃಶ್ಚಿಕ: ಭೂಮಿ, ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ವಿದೇಶದಲ್ಲಿ ಉದ್ಯೋಗಾವಕಾಶಗಳು ದೊರೆಯಲಿವೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ.
ಧನು: ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಯಿಂದ ಪಾರಾಗಬಹುದು. ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಅಗತ್ಯ.
ಮಕರ: ಸರಕಾರಿ ಉದ್ಯೋಗಿಗಳಿಗೆ ಉನ್ನತ ಸ್ಥಾನ ಮಾನದ ಯೋಗ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ತಾಳ್ಮೆಯಿರಲಿ.
ಕುಂಭ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡಬರಲಿದೆ. ಹಣಕಾಸಿನ ವಿಚಾರವಾಗಿ ಆಪ್ತರೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
ಮೀನ: ಮಾನಸಿಕವಾಗಿ ಯಾವುದೋ ವಿಚಾರ ನಿಮ್ಮನ್ನು ಕಾಡುತ್ತಿದ್ದರೆ ಆಪ್ತರೊಂದಿಗೆ ಹಂಚಿಕೊಳ್ಳುವುದು ಉತ್ತಮ. ದಾಂಪತ್ಯದಲ್ಲಿ ತೃಪ್ತಿದಾಯಕ ವಾತಾವರಣವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.