Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 28 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಹಠಮಾರೀ ಧೋರಣೆಯಿಂದ ಇತರರಿಗೆ ತೊಂದರೆಯಾದೀತು. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮೇಲಧಿಕಾರಿಗಳ ಪ್ರಶಂಸೆ ಪಡೆಯಲಿದ್ದೀರಿ.

ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ನಾಲಿಗೆ ಚಪಲದಿಂದ ಆರೋಗ್ಯ ಸಮಸ್ಯೆಯಾದೀತು. ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯರಂಗದಲ್ಲಿ ಹೊಸತನಕ್ಕೆ ಒಗ್ಗಿಕೊಳ್ಳಬೇಕಾಗುತ್ತದೆ. ಸಮಯ, ಸಂದರ್ಭಕ್ಕೆ ತಕ್ಕಂತೆ ನಡೆದುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ತೋರಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಕರ್ಕಟಕ: ನಿಮ್ಮ ಧೋರಣೆಯನ್ನು ಇತರರ ಮೇಲೆ ಹೇರಲು ಹೋಗಬೇಡಿ. ಆತ್ಮೀಯರೊಂದಿಗೆ ಭಿನ್ನಾಭಿಪ್ರಾಯಗಳಾಗುವ ಸಾಧ‍್ಯತೆ. ಸಹೋದರಾದಿ ವರ್ಗದವರಿಂದ ಸಹಾಯವಾದೀತು. ಆಸ್ತಿ ವಿವಾದಗಳು ಬಗೆಹರಿಯಲಿವೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಗೇರುವ ಅವಕಾಶ. ದೂರದ ವ್ಯವಹಾರಗಳಿಂದ ಲಾಭವಾದೀತು. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಭೇಟಿ ಸಾಧ್ಯತೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳನ್ನು ಸಂದರ್ಶಿಸುವ ಯೋಗ.

ಕನ್ಯಾ: ಮಹಿಳೆಯರಿಗೆ ವಸ್ತ್ರ, ಆಭರಣ ಖರೀದಿಗೆ ಯೋಗ ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ದತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಯಾವುದೇ ವಿಚಾರವನ್ನು ಸರಿಯಾಗಿ ಪರಾಮರ್ಶಿಸದೇ ನಿರ್ಧಾರಕ್ಕೆ ಬರುವುದು ಬೇಡ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಗುರುಹಿರಿಯರು ಹಿಂದೆ ಮಾಡಿದ ಒಳ್ಳೆಯ ಕೆಲಸದ ಫಲ ಪಡೆಯಲಿದ್ದೀರಿ.

ವೃಶ್ಚಿಕ: ಜಲೋತ್ಪನ್ನಗಳ ಕ್ರಯ-ವಿಕ್ರಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ತಾಳ್ಮೆಯಿರಲಿ.

ಧನು: ರಾಜಕೀಯ ರಂಗದಲ್ಲಿರುವವರಿಗೆ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆಯಿರಲಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಮಕರ: ಎಷ್ಟೇ ಕಷ್ಟವಿದ್ದರೂ ಆತ್ಮೀಯರು ನಿಮ್ಮ ಜೊತೆಗಿರುವುದರಿಂದ ಚಿಂತಿಸಬೇಕಾಗಿಲ್ಲ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹೊರದೇಶದಲ್ಲಿ ಕೆಲಸದಲ್ಲಿರುವವರಿಗೆ ಉನ್ನತಿಯ ಯೋಗ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ಸಮಯದ ಖುಷಿ ಸಿಗಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ.  ಆಸ್ತಿ ಪರಭಾರೆ ವಿಚಾರದಲ್ಲಿ ವಿಘ್ನಗಳು ಎದುರಾದೀತು. ಹಿರಿಯರ ಸಲಹೆ ಪಾಲಿಸುವುದು ಉತ್ತಮ.

ಮೀನ: ನಿಮ್ಮ ವಾಕ್ಚತುರತೆಯಿಂದ ಸುಲಭವಾಗಿ ವ್ಯವಹಾರ ಕುದುರಿಸಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಯೋಗ್ಯ ವಯಸ್ಕರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಕುಲದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ