Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 15 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಸಲ್ಲದು. ಉದ್ಯೋಗ, ವ್ಯವಹಾರದಲ್ಲಿ ಅಧಿಕ ಒತ್ತಡ ಕಂಡುಬಂದೀತು. ಮಾನಸಿಕವಾಗಿ ಕ್ಷೋಭೆಗೊಳಗಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಷಭ: ವ್ಯಾಪಾರಿ ವರ್ಗದವರಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕಂಡುಬರಲಿದೆ. ಬಳಸಿಕೊಳ್ಳಿ.

ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಸಹೋದರ ವರ್ಗದವರ ಸಹಕಾರ ಕಂಡುಬರಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು, ಎಚ್ಚರಿಕೆಯಿರಲಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಬೇರೆಯವರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನ ಸಾಧ್ಯತೆ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ದೇಹ ಹೈರಾಣಾದೀತು.

ಸಿಂಹ: ಸಮಯ ಸಾಧಕರಿಂದ ದೂರವಿದ್ದರೆ ಉತ್ತಮ. ಸರಿಯಾದ ಲೆಕ್ಕಾಚಾರವಿದ್ದರೂ ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾದೀತು. ಮಹಿಳೆಯರಿಂದ ಕೆಲಸ ಕಾರ್ಯಗಳಲ್ಲಿ ಸಹಕಾರ ಕಂಡುಬರಲಿದೆ.

ಕನ್ಯಾ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಕಂಡುಬರಲಿದೆ. ಮಕ್ಕಳಿಗೆ ಉಡುಗೊರೆ ಮೂಲಕ ಸಂತೋಷ ಕೊಡಲಿದೆ. ಸಾಂಸಾರಿಕವಾಗಿ ತೃಪ್ತಿದಾಯಕ ಬೆಳವಣಿಗೆ.

ತುಲಾ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಹತ್ವದ ಯೋಜನೆ ಹಾಕಿಕೊಳ್ಳಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಜವಾಬ್ಧಾರಿ ಹೆಚ್ಚಾಗುವುದು. ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಅಧ್ಯಯನಶೀಲರಿಗೆ ಉನ್ನತ ಅವಕಾಶಗಳು ಕಂಡುಬರಲಿದೆ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಪ್ರೇಮಿಗಳಿಗೆ ಮನೆಯವರಿಂದ ಒಪ್ಪಿಗೆ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ದೈವಾನುಕೂಲದಿಂದ ನೀವು ಇಂದು ಕೈಗೊಳ್ಳುವ ಕೆಲಸಗಳು ಯಶಸ್ವಿಯಾಗಿ ಮುಂದುವರಿಯಲಿದೆ. ದಂಪತಿಗಳು ಅನಗತ್ಯ ಚರ್ಚೆಗೆ ಆಸ್ಪದ ಕೊಡಬೇಡಿ. ಗೃಹ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು.

ಮಕರ: ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ಅವಕಾಶ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ದೂರದ ವ್ಯವಹಾರಗಳಿಂದ ಲಾಭವಾಗಲಿದೆ. ಸಂದರ್ಭೋಚಿತ ನಿರ್ಧಾರ ತೆಗೆದುಕೊಳ್ಳಲಿದ್ದೀರಿ.

ಕುಂಭ: ಪೂರ್ವಾಪರ ತಿಳಿದು ಮುನ್ನಡೆಯುವುದರಿಂದ ಕಾರ್ಯರಂಗದಲ್ಲಿ ವಿಘ್ನಗಳು ದೂರವಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದೇಹಾರೋಗ್ಯ ವಿಚಾರದಲ್ಲಿ ಉದಾಸೀನತೆ ಬೇಡ.

ಮೀನ: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಹೊಸದಾಗಿ ಮದುವೆಯಾಗಿರುವವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಭೂಮಿ, ವಾಹನ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?