Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 17 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ನೀವು ಶ್ರಮವಹಿಸುವ ಸಂದರ್ಭ ಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದಷ್ಟೇ ಖರ್ಚೂ ಇರಲಿದೆ. ಕುಟುಂಬ ಸದಸ್ಯರ ನೋವಿಗೆ ಸ್ಪಂದಿಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೃಷಭ: ನಿಮ್ಮ ಯೋಗ್ಯತೆಗೆ ಮೀರಿ ಸಾಲ ಮಾಡುವ ತೊಂದರೆ ತಂದುಕೊಳ್ಳಬೇಡಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ತಾಳ್ಮೆಯಿರಲಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ವಿಶೇಷಾಧಿಕಾರ ಅನುಭವಿಸುವ ಯೋಗ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ದೇಹಾರೋಗ್ಯದ ಸಮಸ್ಯೆಯಿಂದ ಓದಿಗೆ ತೊಂದರೆಯಾದೀತು.

ಕರ್ಕಟಕ: ದೇವತಾ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯ ಜೀವಗಳಿಗೆ ನಿಮ್ಮ ಮಾತಿನಿಂದ ನೋವಾಗದಂತೆ ಎಚ್ಚರಿಕೆ ವಹಿಸಿ.

ಸಿಂಹ: ಸಂದರ್ಭಾನುಸಾರವಾಗಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಮನಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ‍್ಯತೆ. ಭೂಮ್ಯಾದಿ ವ್ಯವಹಾರಗಳಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಹೊಸದಾಗಿ ಆರಂಭಿಸಿದ್ದ ಕೆಲಸಗಳಿಗೆ ಹಿನ್ನಡೆಯುಂಟಾದೀತು. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ್ಯತೆ. ನಿರುದ್ಯೋಗಿಗಳು ಉದ್ಯೋಗ ಬೇಟೆಯ ಪ್ರಯತ್ನ ಮುಂದುವರಿಸಬೇಕಾಗುತ್ತದೆ. ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನೆಮ್ಮದಿ ಸಿಗಲಿದೆ.

ವೃಶ್ಚಿಕ: ನಿಮ್ಮ ಒಳ್ಳೆಯತನ ಇತರರು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ನಯವಂಚಕರಿಂದ ದೂರವಿರುವುದು ಉತ್ತಮ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಅನಗತ್ಯ ಚಿಂತೆ ಬೇಡ.

ಧನು: ಪಿತೃ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಮನೆ ಸಂಬಂಧ ಹಲವು ಖರ್ಚು ವೆಚ್ಚಗಳು ಎದುರಾದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕಿರಿಯರೊಂದಿಗೆ ಸಂಘರ್ಷಕ್ಕೆ ಎಡೆ ಮಾಡಿಕೊಡದಿರಿ.

ಮಕರ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದಾಯಾದಿ ಕಲಹಳಿಗೆ ಮುಕ್ತಿ ಸಿಗಲಿದೆ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರುವುದು. ಚಿಂತೆ ಬೇಡ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದು ತಾನಾಗಿಯೇ ಆಗುವಂತಹ ಅಚ್ಚರಿ ಎದುರಾಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಅವಕಾಶ ಸಿಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರುವುದು. ದೇವತಾ ಪ್ರಾರ್ಥನೆ ಮರೆಯದಿರಿ.

ಮೀನ: ನಿಮ್ಮಲ್ಲಿರುವ ಕೀಳರಿಮೆಯಿಂದಾಗಿ ಹೊಸ ಕೆಲಸಗಳಿಗೆ ಕೈ ಹಾಕಲು ಹಿಂದೇಟು ಹಾಕಲಿದ್ದೀರಿ. ಹಿರಿಯರಿಗೆ ಧಾರ್ಮಿ ಕ್ಷೇತ್ರಗಳ ಸಂದರ್ಶನ ಯೋಗ. ದೇಹಕ್ಕೆ ಅಧಿಕ ಪರಿಶ್ರಮವಾಗುವಂತಹ ಕೆಲಸ ಮಾಡಬೇಕಾದೀತು. ಎಚ್ಚರಿಕೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?