Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 21 ಡಿಸೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ಭೋಜನ ಮಾಡುವ ಯೋಗ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಿಥುನ: ಪ್ರಾಮಾಣಿಕತೆಯಿಂದ ಮಾಡುವ ಕೆಲಸಗಳಿಗೆ ತಕ್ಕ ಫಲ ಸಿಗಲಿದೆ. ಮಾತೃ ಸಮಾನರಿಂದ ನಿಮ್ಮ ಕೆಲಸಗಳಿಗೆ ಸಹಕಾರ ಸಿಗಲಿದೆ. ಬಂಧು ಮಿತ್ರರ ಭೇಟಿ ಸಾಧ‍್ಯತೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕರ್ಕಟಕ: ಧನಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದ್ದು, ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಮನಸ್ಸಿನಲ್ಲಿರುವ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ಸರಕಾರಿ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಅಧ‍್ಯಯನ ಶೀಲರಿಗೆ ಹೊಸ ಅವಕಾಶಗಳು ಕಂಡುಬರಲಿದೆ. ಪತ್ನಿ ಸಹಕಾರ ಮನಸ್ಸಿಗೆ ನೆಮ್ಮದಿ ನೀಡಲಿದೆ. ಅಧಿಕ ಪರಿಶ್ರಮದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ತುಲಾ: ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಸಾಂಸಾರಿಕ ವಿಚಾರದಲ್ಲಿ ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆ ಕೊಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಶ್ಚಿಕ: ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಸರಿಯಾಗಿ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ನಿಮ್ಮ ಹಳೆಯ ಬಾಕಿಗಳು ಪಾವತಿಯಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆಯಿರಲಿ.

ಧನು: ಎಷ್ಟೇ ದುಡಿಮೆಯಿದ್ದರೂ ಹಣ ಕೈಗೆ ಬರುತ್ತಿಲ್ಲ ಎಂಬ ಭಾವನೆ ಬರಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಮಹಿಳೆಯರಿಗೆ ಗೃಹಕೃತ್ಯಗಳ ಒತ್ತಡ ಕಂಡುಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ಕಟ್ಟಡ ಕಾಮಗಾರಿ ಯೋಜನೆಗಳನ್ನು ಮುಂದೂಡುವುದು ಉತ್ತಮ. ಸರಕಾರೀ ನೌಕರರಿಗೆ ಕೊಂಚ ಬಿಡುವು ಸಿಕ್ಕೀತು. ಅನಗತ್ಯ ಚಿಂತೆ ಬೇಡ.

ಕುಂಭ: ನೀವು ಅತಿಯಾಗಿ ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಸಾಧ‍್ಯತೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ.

ಮೀನ: ಎಷ್ಟೇ ಕಾರ್ಯದೊತ್ತಡವಿದ್ದರೂ ತಾಳ್ಮೆ ಕಳೆದುಕೊಳ್ಳಬೇಡಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?