ಮೇಷ: ನಿಮ್ಮ ಮಾತಿನಿಂದ ಇತರರಿಗೆ ಕಿರಿ ಕಿರಿಯಾಗದಂತೆ ನೋಡಿಕೊಳ್ಳಿ. ಆರ್ಥಿಕ ವ್ಯವಹಾರದಲ್ಲಿ ಅಡೆತಡೆಗಳು ನಿವಾರಣೆಯಾಗಲಿದೆ. ಕ್ಷುಲ್ಲುಕ ವಿಚಾರಕ್ಕೆ ತಲೆಕೆಡಿಸಿಕೊಳ್ಳಬೇಡಿ. ಅನಗತ್ಯ ಚಿಂತೆ ಬೇಡ.
ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಇಷ್ಟ ಮಿತ್ರರೊಂದಿಗೆ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳೊಂದಿಗೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಆರೋಗ್ಯದಲ್ಲಿ ಸುಧಾರಣೆಯಾದೀತು.
ಮಿಥುನ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಸಹವಾಸ ದೋಷದಿಂದ ದುರ್ವರ್ತನೆ ತೋರುವ ಸಾಧ್ಯತೆ.
ಕರ್ಕಟಕ: ಕಾರ್ಯರಂಗದಲ್ಲಿ ನಿಮಗೆ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ನೆಮ್ಮದಿಯಾದೀತು. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.
ಸಿಂಹ: ನಿಮ್ಮಿಂದ ಸಾಲ ಪಡೆದವರಿಂದ ಪ್ರತ್ಯುಪಕಾರ ಸಿಗಲಿದೆ. ಸಂಪಾದನೆ ಎಷ್ಟೇ ಇದ್ದರೂ ಅಷ್ಟೇ ಖರ್ಚೂ ಇರಲಿದೆ. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ನೆಮ್ಮದಿ.
ಕನ್ಯಾ: ಪರರ ಆಸ್ತಿ ವಿವಾದಗಳನ್ನು ಬಗೆಹರಿಸಲು ಪ್ರಯತ್ನಿಸಲಿದ್ದೀರಿ. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಮಾತಿನ ಮೇಲೆ ನಿಗಾ ಇರಲಿ.
ತುಲಾ: ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳು ಬಗೆಹರಿಯಲಿವೆ. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ತಾಳ್ಮೆಯಿಂದ ವ್ಯವಹರಿಸಿ.
ಧನು: ಉದ್ಯೋಗ, ವ್ಯವಹಾರದಲ್ಲಿ ಏರಿಳಿತ ಸಾಮಾನ್ಯ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ.
ಮಕರ: ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ತೋರಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬಂದೀತು. ನೀವು ಎಷ್ಟೇ ಬೇಡವೆಂದು ಬಿಟ್ಟಿದ್ದರೂ ಕೆಲವೊಂದು ಜವಾಬ್ಧಾರಿಗಳು ತಾನಾಗೇ ಹೆಗಲಿಗೇರಲಿದೆ.
ಕುಂಭ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಿದ್ದರೆ ಪ್ರಗತಿ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ವಿದ್ಯಾರ್ಥಿಗಳಿಗೆ ಕ್ರಿಯಾತ್ಮಕ ಕೆಲಸಗಳಲ್ಲಿ ಆಸಕ್ತಿ ಕಂಡುಬರಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ.
ಮೀನ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಾತಾ, ಪಿತೃಗಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.