ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.
ವೃಷಭ: ಉದ್ಯೋಗ, ವ್ಯವಹಾರದಲ್ಲಿ ಬದಲಾವಣೆಗೆ ಪ್ರಯತ್ನ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ತಾಳ್ಮೆಯಿರಲಿ.
ಮಿಥುನ: ಮನೆಗೆ ವಿಶೇಷ ಅತಿಥಿ ಸ್ವಾಗತಕ್ಕೆ ಸಿದ್ಧತೆ ನಡೆಸಲಿದ್ದೀರಿ. ರೈತಾಪಿ ವರ್ಗದವರಿಗೆ ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭವಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.
ಕರ್ಕಟಕ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಅಡೆತಡೆಗಳು ಕಂಡುಬಂದೀತು. ಸದಾ ಚಟುವಟಿಕೆಯಿಂದಿರಬೇಕಾದ ದಿನವಾಗಿರಲಿದೆ. ಅನಗತ್ಯ ಚಿಂತೆ ಬೇಡ.
ಸಿಂಹ: ದೂರದ ವ್ಯವಹಾರದಲ್ಲಿ ಅನ್ಯರ ಸಹಾಯ ಪಡೆಯಬೇಕಾಗುತ್ತದೆ. ರಾಜಕೀಯ ರಂಗದಲ್ಲಿರುವವರಿಗೆ ಅಧಿಕ ಪರಿಶ್ರಮ ಪಡಬೇಕಾದ ದಿನ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕನ್ಯಾ: ಮಾತಾ ಪಿತೃಗಳೊಂದಿಗೆ ಸಂಯಮದಿಂದ ವರ್ತಿಸಿ. ಇನ್ನೊಬ್ಬರ ಅಭಿಪ್ರಾಯ ಆಲಿಸುವ ತಾಳ್ಮೆಯಿರಲಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.
ತುಲಾ: ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ನಿರುದ್ಯೋಗಿಗಳಿಗೆ ವಿದೇಶದಲ್ಲಿ ಉದ್ಯೋಗ ಅವಕಾಶ ಸಿಗುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.
ವೃಶ್ಚಿಕ: ಅಧ್ಯಯನ, ಸಂಶೋಧನಾ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಸಂಗಾತಿಯ ಸಹಕಾರ ಕಂಡುಬರುವುದು. ನೆಮ್ಮದಿಯಿರಲಿದೆ.
ಧನು: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಯೋಜನೆಗಳು ಇತರರ ಗಮನ ಸೆಳೆಯಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕೋರ್ಟು ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.
ಮಕರ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವಾಹನ, ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು.
ಕುಂಭ: ಪರರಿಗೆ ಸಹಾಯ ಮಾಡುವ ಮೊದಲು ಪೂರ್ವಾಪರ ತಿಳಿದು ಮುಂದುವರಿಯಿರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.
ಮೀನ: ಮನಸ್ಸಿಗೆ ಉಲ್ಲಾಸ ಕೊಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ವ್ಯವಹಾರಗಳಲ್ಲಿ ಜಯ.