Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 7 ಮೇ 2023 (06:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉತ್ತಮ ಧನಾರ್ಜನೆಯಿದ್ದರೂ ಖರ್ಚಿನ ಬಗ್ಗೆ ಚಿಂತೆಯಾಗಲಿದೆ. ನೆರೆಹೊರೆಯವರೊಡನೆ ಬಾಂಧವ್ಯ ವೃದ್ಧಿಗೆ ಮುಂದಾಗಲಿದ್ದೀರಿ. ಯಂತ್ರೋಪಕರಣಗಳಿಂದ ತೊಂದರೆ ಸಾಧ‍್ಯತೆ. ಆಪ್ತರನ್ನು ಭೇಟಿಯಾಗಲಿದ್ದೀರಿ.

ವೃಷಭ: ನೀವು ಬಯಸಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿಯಾಗಲಿದೆ. ಕಾರ್ಯರಂಗದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಎದುರಾಗಲಿದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.

ಮಿಥುನ: ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಸಹೋದರಾದಿ ಸಂಬಂಧಿಗಳ ಜೊತೆ ಸಂಬಂಧ ಸುಧಾರಣೆಯಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಉದ್ಯೋಗ ರಂಗದಲ್ಲಿ ನಿರೀಕ್ಷಿತ ಸ್ಥಾನ ಮಾನ ಯೋಗ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಅನಗತ್ಯ ಚಿಂತೆ ಬೇಡ.

ಸಿಂಹ: ಮಾತಿನ ಮೇಲೆ ಹಿಡಿತವಿರಲಿ. ದೇಹಾರೋಗ್ಯದ ವಿಚಾರದಲ್ಲಿ ಸುಧಾರಣೆ ಕಂಡುಬರಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ.

ಕನ್ಯಾ: ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಬಂಧು ಮಿತ್ರರಿಂದ ಸಹಕಾರ ಕಂಡುಬರಲಿದೆ. ಆಸ್ತಿ  ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಜಲೋತ್ಪನ್ನಗಳ ಕ್ರಯ-ವಿಕ್ರಯ ವ್ಯವಹಾರ ಮಾಡುವವರಿಗೆ ಮುನ್ನಡೆ ಯೋಗ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ದೇವತಾ ಕಾರ್ಯಗಳಲ್ಲಿ ಆಸಕ್ತಿ ಕಂಡುಬರುವುದು.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಲಾಭವಾಗಲಿದೆ. ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದ್ದೀರಿ. ಬಂಧು ಮಿತ್ರರ ಸಮಾಗಮವಾಗಲಿದೆ. ಕೌಟುಂಬಿಕವಾಗಿ ಸುಖ, ಸಂತೋಷವಿರಲಿದೆ. ಚಿಂತೆ ಬೇಡ.

ಧನು: ಸಂಗಾತಿಯ ಕೆಲವೊಂದು ವಿಚಾರಗಳಿಗೆ ತಕರಾರು ತೆಗೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆ ಬೇಡ. ಕುಟುಂಬ ಸಮೇತ ಪ್ರಯಾಣ ಮಾಡಲಿದ್ದೀರಿ.

ಮಕರ: ನಿಮಗೆ ಬರಬೆಕಾಗಿದ್ದ ಬಾಕಿ ಹಣ ಸಂದಾಯವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿಕೊಳ್ಳಿ.

ಕುಂಭ: ನಿಮ್ಮ ವಾಕ್ಚತುರತೆಯಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ವಿಶೇಷ ಭೋಜನ ಮಾಡುವ ಯೋಗ. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು.

ಮೀನ: ಧನಾರ್ಜನೆಗಾಗಿ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ಬಂಧು ಮಿತ್ರರ ಆಗಮನ ಸಾಧ‍್ಯತೆ. ವ್ಯವಹಾರ ನಿಮಿತ್ತ ಸಂಚಾರ ಮಾಡಬೇಕಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments