ಮೇಷ: ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯಾಸಪಡಬೇಕಾದೀತು. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.
ವೃಷಭ: ನಿಮ್ಮ ಕೆಲಸ ಕಾರ್ಯಗಳ ನಿಮಿತ್ತ ಇನ್ನೊಬ್ಬರನ್ನು ಆಶ್ರಯಿಸಬೇಕಾದ ಪರಿಸ್ಥಿತಿಯಿರಲಿದೆ. ನಾಯಕತ್ವ ಗುಣದಿಂದ ಇತರರನ್ನು ನಿಮ್ಮತ್ತ ಸೆಳೆಯಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ.
ಮಿಥುನ: ನಿರುದ್ಯೋಗಿಗಳಿಗೆ ಯೋಗ್ಯತೆಗೆ ಅನುಸಾರವಾಗಿ ಉದ್ಯೋಗ ಸಿಗುವುದು. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರುವುದು. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕರ್ಕಟಕ: ಕುಟುಂಬ ಸೌಖ್ಯಕ್ಕಾಗಿ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ.
ಸಿಂಹ: ನಿಮ್ಮಲ್ಲಿರುವ ವಿಶೇಷ ಪ್ರತಿಭೆಗಳನ್ನು ಹೊರಹಾಕಲು ಅವಕಾಶ ಸಿಗುವುದು. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ವಸ್ತು ಸ್ಥಿತಿ ಅರಿತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.
ಕನ್ಯಾ: ನಿಮ್ಮ ಬೆನ್ನ ಹಿಂದೆ ನಡೆಯುತ್ತಿದ್ದ ಪಿತೂರಿಗಳು ಬೆಳಕಿಗೆ ಬರಲಿವೆ. ಮಕ್ಕಳ ಭವಿಷ್ಯದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.
ತುಲಾ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗುವುದು. ಹಿರಿಯರ ಕೆಲಸಗಳಲ್ಲಿ ಸಹಾಯ ಮಾಡಲಿದ್ದೀರಿ. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದುಂದು ವೆಚ್ಚಕ್ಕೆ ಕಡಿವಾಣವಿರಲಿ.
ವೃಶ್ಚಿಕ: ಸರಕಾರಿ ಲೆಕ್ಕಪತ್ರಗಳನ್ನು ಕಳೆದುಕೊಳ್ಳುವ ಭೀತಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಧನು: ಇನ್ನೊಬ್ಬರಿಗೆ ಮಾಡುವ ಸಣ್ಣ ಪುಟ್ಟ ಸಹಾಯಗಳಿಂದ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಬಂಧು ಮಿತ್ರರ ಭೇಟಿ ಸಾಧ್ಯತೆ. ಅನಿರೀಕ್ಷಿತ ಧನಾಗಮನವಾಗಲಿದೆ. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.
ಮಕರ: ವ್ಯವಹಾರದಲ್ಲಿ ಪಾಲುದಾರರೊಂದಿಗೆ ಭಿನ್ನಾಭಿಪ್ರಾಯಗಳಾಗುವ ಸಾಧ್ಯತೆ. ಶಾಂತ ಚಿತ್ತರಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕುಂಭ: ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರುವುದು. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಅನಗತ್ಯ ಚಿಂತೆ ಬೇಡ.
ಮೀನ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಿಗೆ ಅನುಕೂಲಕರ ದಿನವಾಗಿರಲಿದೆ.